ಬ್ಲಾಕ್ ಕಾಂಗ್ರೇಸ್ ಸಮಿತಿಯ ವತಿಯಿಂದ ಪ್ರತಿಭಟಣೆ ಕಾಳಜಿ ರಿಲೀಫ್ ಫಂಡ್ ಲೆಕ್ಕ ಪತ್ರ ನೀಡಲು ಬಂಗೇರ ಆಗ್ರಹ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ : ಕೊರೋನಾ ನಿಯಂತ್ರಣ ಕಾರ್ಯಕ್ರಮದಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ನಡೆಸಿರುವ ವ್ಯಾಪಕ ಅವ್ಯವಹಾರ ಹಾಗೂ ಭ್ರಷ್ಟಾಚಾರವನ್ನ ವಿರೋಧಿಸಿ ಮತ್ತು ಕಾಳಜಿ ರಿಲೀಫ್ ಫಂಡ್ ಲೆಕ್ಕ ಪತ್ರ ನೀಡುವಂತೆ ಒತ್ತಾಯಿಸಿ ಆ.೨೪ ರಂದು ಬೆಳ್ತಂಗಡಿಯ ಬಸ್ ನಿಲ್ದಾಣದ ಬಳಿ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾಜಿ ಶಾಸಕ ವಸಂತ ಬಂಗೇರ ಮಾತನಾಡಿ ಕಳೆದ ಮಳೆಗಾಲದ ಅವಧಿಯಲ್ಲಿ ಪ್ರಕೃತಿ ವಿಕೋಪದಿಂದ ತಾಲೂಕಿನಲ್ಲಿ ಬಹಳಷ್ಟು ಹಾನಿಯಾಗಿದ್ದು, ಈ ಸಂಧರ್ಭ ಶಾಸಕ ಹರೀಶ್ ಪೂಂಜಾರವರು ಬೇನಾಮಿಯಾಗಿ ಕಾಳಜಿ ರಿಲೀಫ್ ಫಂಡ್ ಹೆಸರಿನಲ್ಲಿ ಕೋಟ್ಯಾಂತರ ರೂ ಹಣ ಸಂಗ್ರಹ ಮಾಡಿದ್ದಾರೆ. ಅದನ್ನು ಯಾವುದಕ್ಕೆ ಖರ್ಚು ಮಾಡಲಾಗಿದೆ ಎಂದು ಅದರ ಲೆಕ್ಕ ಪತ್ರಗಳನ್ನು ನೀಡಬೇಕೆಂದು ಆಗ್ರಹಿಸಿದರು. ಕಾರ್ಯಕ್ರಮದ ನಂತರ ಶಾಸಕರ ಕಛೇರಿ ಶ್ರಮಿಕದ ಎದುರು ಸಾಂಕೇತಿಕವಾಗಿ ಪ್ರತಿಭಟನೆ ನಡೆಸಲು ತೆರಳಿದಾಗ ಪೊಲೀಸರು ಇದಕ್ಕೆ ಆಕ್ಷೇಪಿಸಿದರು. ಆದರೆ ನಾವು ಪ್ರತಿಭಟನೆ ನಡೆಸಿಯೇ ಸಿದ್ಧ ಎಂದು ಹೇಳಿ ಶಾಸಕರ ಕಛೇರಿಯ ಎದುರು ಪ್ರತಿಭಟನೆ ನಡೆಸಿದರು. ಈ ಸಂಧರ್ಭದಲ್ಲಿ ಜಿಲ್ಲಾ ಪಂಚಾಯತ್ ಸಾವುಲ್ ಹಮೀದ್, ಬ್ಲಾಕ್ ಅಧ್ಯಕ್ಷರುಗಳಾದ ಶೈಲೇಶ್ ಕುಮಾರ್, ರಂಜನ್ ಜಿ ಗೌಡ ಮಾತನಾಡಿದರು ಜಿಲ್ಲಾ ಪಂಚಾಯತ್ ಸದಸ್ಯ ಶೇಕರ ಕುಕ್ಕೇಡಿ, ಮೊದಲಾದವರು ಸೇರಿದಂತೆ ವಿವಿಧ ಘಟಕದ ಅಧ್ಯಕ್ಷರುಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

 

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.