ಬೆಳ್ತಂಗಡಿ: ತಾಲೂಕು ಪಂಚಾಯತ್ ಸಾಮಾನ್ಯ ಸಭೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತ್ ನ ಸಾಮಾನ್ಯ ಸಭೆ ಆ.25 ರಂದು ತಾ.ಪಂ ಅಧ್ಯಕ್ಷೆ ದಿವ್ಯಜ್ಯೋತಿ ಅವರ ಅಧ್ಯಕ್ಷತೆಯಲ್ಲಿ ತಾ.ಪಂ ಸಭಾಂಗಣದಲ್ಲಿ ನಡೆಯಿತು.

ತಾ.ಪಂ ಉಪಾಧ್ಯಕ್ಷೆ ವೇದಾವತಿ, ಕಾರ್ಯನಿರ್ವಾಹಣಾಧಿಕಾರಿ ಕುಸುಮಾಧರ್, ಸ್ಥಾಯಿ ಸಮಿತಿ ಅಧ್ಯಕ್ಷ ಶಶಿಧರ್ ಕಲ್ಮಂಜ, ತಾ.ಪಂ‌ ಸದಸ್ಯರು ಉಪಸ್ಥಿತರಿದ್ದರು. ತಾ.ಪಂ ಸಭೆಗೆ ಪ್ರಥಮವಾಗಿ ಆಗಮಿಸಿದ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಅವರನ್ನು ತಾ.ಪಂ ವತಿಯಿಂದ ಅಭಿನಂದಿಸಲಾಯಿತು. ಸದಸ್ಯರ ಪರವಾಗಿ ಸುಧೀರ್‌ ಆರ್ ಸುವರ್ಣ ಅಭಿನಂದನೆ ಸಲ್ಲಿಸಿದರು.

ಪ್ರತಾಪಸಿಂಹ ನಾಯಕ್ ರವರು ಮಾತನಾಡಿ, ಪ್ರಜಾಪ್ರಭುತ್ವದ ಮೂಲ ಆಶಯದಂತೆ ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಬದುಕು ಕಟ್ಟಿಕೊಡುವುದು ಜನಪ್ರತಿನಿಧಿಗಳಾದ ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು. ತಾಲೂಕಿನ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.