HomePage_Banner_
HomePage_Banner_

ಅಂತಾರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ಉಚಿತ ಆರೋಗ್ಯ ತಪಾಸಣೆ ಮತ್ತು ಕಣ್ಣಿನ ತಪಾಸಣೆ ಶಿಬಿರ

ರೋಟರಿ ಕ್ಲಬ್ ಬೆಳ್ತಂಗಡಿ ಇದರ ವತಿಯಿಂದ ಆರ್.ಸಿ.ಸಿ ಮುಂಡಾಜೆ, ಪೊಲೀಸ್ ಇಲಾಖೆ, ಕರ್ನಾಟಕ ಮಾನವ ಹಕ್ಕುಗಳ ಸಮಿತಿ ಬೆಳ್ತಂಗಡಿ, ಸ್ಪಂದನ ಪೊಲಿಕ್ಲಿನಿಕ್ ಬೆಳ್ತಂಗಡಿ, ಹಾಗೂ ಯುವ ವಕೀಲರ ವೇದಿಕೆ ಬೆಳ್ತಂಗಡಿ, ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆ ಇವರ ಸಹಕಾರದೊಂದಿಗೆ ಅಂತಾರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ಧರ್ಮಸ್ಥಳ ಠಾಣಾ ಪೊಲೀಸರಿಗೆ ಹಮ್ಮಿಕೊಳ್ಳಲಾಗಿದ್ದ ಉಚಿತ ಆರೋಗ್ಯ ತಪಾಸಣೆ ಮತ್ತು ಕಣ್ಣಿನ ತಪಾಸಣೆ ಶಿಬಿರ ಆ. 25 ರಂದು ನಡೆಯಿತು.

ಉದ್ಘಾಟನೆ ಯನ್ನು ಧರ್ಮಸ್ಥಳ ಠಾಣಾ ಎಸ್.ಐ ಪವನ್ ಕುಮಾರ್ ನಡೆಸಿದರು. ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಅಧ್ಯಕ್ಷ ಬಿ.ಕೆ ಧನಂಜಯ ರಾವ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ವಕೀಲರ ಸಂಘ ಬೆಳ್ತಂಗಡಿ ಅಧ್ಯಕ್ಷ ಅಲೋಶಿಯಸ್ ಲೋಬೋ, ಕರ್ನಾಟಕ ಮಾನವ ಹಕ್ಕುಗಳ ಸಮಿತಿ ಅಧ್ಯಕ್ಷ ಪಿ.ಸಿ ಸೆಬಾಸ್ಟಿಯನ್, ಶ್ರೀ ಮಂಜುನಾಥ ಸ್ವಾಮಿ‌ ದೇವಸ್ಥಾನದ ಪಾರುಪತ್ಯದಾರ ಲಕ್ಷ್ಮೀನಾರಾಯಣ ರಾವ್, ಎಸ್.ಡಿ.ಎಂ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಕಾಶಿನಾಥ್ ಶೆಣೈ, ಧರ್ಮಸ್ಥಳ ಪಂ.‌ಆಡಳಿತಾಧಿಕಾರಿ ಡಾ,ಜಯಕೀರ್ತಿ ಜೈನ್, ಅಭಿವೃದ್ಧಿ ಅಧಿಕಾರಿ ಉಮೇಶ್ , ಆರ್.ಸಿ.ಸಿ ಅಧ್ಯಕ್ಷೆ ಅಶ್ವಿನಿ ಎ ಹೆಬ್ಬಾರ್ ಉಪಸ್ಥಿತರಿದ್ದರು.

ಯುವ ವಕೀಲರ ಸಂಘದ ಅಧ್ಯಕ್ಷ  ಪ್ರಶಾಂತ್ ಸ್ವಾಗತಿಸಿದರು. ಶ್ರೀನಿವಾಸ ರಾವ್ ಕಾರ್ಯಕ್ರಮ ನಿರೂಪಿಸಿದರು. ರೋಟರಿ ಕಾರ್ಯದರ್ಶಿ ಶ್ರೀಧರ ಕೆ.ವಿ ವಂದಿಸಿದರು. ಸಮಾರಂಭದಲ್ಲಿ ಯುವ ದಿನಾಚರಣೆ ಅಂಗವಾಗಿ ಜನಸ್ನೇಹಿ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ರವೀಂದ್ರ ಅವರನ್ನು ಸನ್ಮಾನಿಸಲಾಯಿತು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.