ಕಳಿಯ : ಇಲ್ಲಿಯ ಕಳಿಯ ಮತ್ತು ನ್ಯಾಯತರ್ಫು ಗ್ರಾಮದ ವಿವಿಧ ಬೂತ್ ಸಮಿತಿಯ ಅಧ್ಯಕ್ಷ, ಸದಸ್ಯರು ಆಯ್ಕೆ ಪರಪ್ಪು ಸಮೀಪದ ನೇವಿಲ್ ಸ್ಟೀವನ್ ಮೊರಸ್ ಮನೆಯ ವಠಾರದಲ್ಲಿ ಆ.30 ರಂದು ಜರುಗಿತು.
ಮಾಜಿ ಶಾಸಕ ವಸಂತ ಬಂಗೇರ ವೇದಿಕೆಯಲ್ಲಿ ಉಪಸ್ಥಿತರಿದ್ದು ಮಾತನಾಡುತ್ತಾ ಮುಂದಿನ ಗ್ರಾಮ ಪಂಚಾಯತು,ತಾಲೂಕು ಪಂಚಾಯತು, ಜಿಲ್ಲಾ ಪಂಚಾಯತು ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರನ್ನು ಆಯ್ಕೆ ಮಾಡಬೇಕು. ಜೊತೆಗೆ ನಮ್ಮ ತಾಲೂಕಿನ ಹಾಲಿ ಶಾಸಕರು ಹಲವಾರು ಆವ್ಯವಹಾರ ವಂಚನೆಗಳನ್ನು ಮಾಡುವ ಮೂಲಕ ಕಾಲಹರಣ ಮಾಡುತ್ತಿದ್ದಾರೆ. ಪ್ರತಿ ಗ್ರಾಮ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮನೆಮನೆಗೆ ಹೋಗಿ ಪಕ್ಷದ ಸಂಘಟನೆಯನ್ನು ಬಲಗೊಳಿಸ ಬೇಕು ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದು ಮಾತನಾಡುತ್ತಾ ಕೊಯ್ಯೂರ್ ಪಕ್ಷದ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಸಕ್ರಿಯವಾಗಿ ಕೆಲಸವನ್ನು ಮಾಡಲು ಅವಕಾಶ ನೀಡುತ್ತದೆ.ಪಕ್ಷದಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿ ಪಕ್ಷ ಸಂಘಟನೆಯು ಬಲಿಷ್ಠವಾಗಲು ಸಾಧ್ಯ ಎಂಬ ಹೇಳಿದರು.
ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶೈಲೇಶ್ ಕುಮಾರ್ ಪದಾಧಿಕಾರಿಗಳ ಆಯ್ಕೆ ಮಾಡಿ ಸೂಕ್ತ ಮಾಹಿತಿ ನೀಡಿದರು.ಬೆಳ್ತಂಗಡಿ ಯುವ ಕಾಂಗ್ರೆಸ್ ಅಧ್ಯಕ್ಷ ಅಭಿನಂದನ್ ಹರೀಶ್ ಕುಮಾರ್,ಯುವ ಕಾಂಗ್ರೆಸ್ ಉಪಾಧ್ಯಕ್ಷ ಸಲೀಂ ಗುರುವಾಯನಕೆರೆ, ಸಾಮಾಜಿಕ ಜಾಲತಾಣದ ಅಧ್ಯಕ್ಷ ಸಂದೀಪ್ ನಿರಾಳಿಕೆ ಮತ್ತು ತಾಲೂಕು ಪಂಚಾಯತು ಸದಸ್ಯ ಪ್ರವೀಣ್ ಕುಮಾರ್ ಕೊಯ್ಯೂರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ನಗರ ಕಳಿಯ ಪಂಚಾಯತು ಮಾಜಿ ಅಧ್ಯಕ್ಷರು,ಸದಸ್ಯರು ಕಳಿಯ,ನ್ಯಾಯತರ್ಫು ಗ್ರಾಮದ ಬೂತ್ ಸಮಿತಿ ಅಧ್ಯಕ್ಷ ಮತ್ತು ಸದಸ್ಯರು ಉಪಸ್ಥಿತರಿದ್ದರು.