
ಬೆಳಾಲು; ಇಲ್ಲಿಯ ಅನಂತ್ತೋಡಿ ಶ್ರೀ ಅನಂತ ಪದ್ಮನಾಭ ಸ್ವಾಮಿ ದೇವಸ್ಥಾನದ ವಠಾರದ ಸ್ವಚ್ಚತಾ ಕಾರ್ಯದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು, ಬೈಲುವಾರು ಸಮಿತಿಗಳ ಪದಾಧಿಕಾರಿಗಳು ಸದಸ್ಯರು, ಮಹಿಳಾ ಸಮಿತಿಯ ಸದಸ್ಯರು, ಶ್ರೀ ಅನಂತೇಶ್ವರ ಭಜನಾ ಮಂಡಳಿಯ ಪದಾಧಿಕಾರಿಗಳು ಮತ್ತು ಸದಸ್ಯರು, ಊರವರು ಭಾಗವಹಿಸಿ ಶ್ರಮದಾನದ ಮೂಲಕ ಸ್ವಚ್ಚತಾ ಕಾರ್ಯ ನೆರವೇರಿಸಿದರು.