HomePage_Banner_
HomePage_Banner_

ಸೆ.1 ರಿಂದ ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ಸೇವೆ ಆರಂಭ-ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಬೆಳ್ತಂಗಡಿ: ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ಸೆಪ್ಟೆಂಬರ್ ಒಂದರಿಂದ ಸೇವೆ ಆರಂಭಿಸಬಹುದು. ಆದರೆ ಅನ್ನ ದಾಸೋಹ ಮತ್ತು ಸಮಾರಂಭಗಳಿಗೆ ಅವಕಾಶವಿಲ್ಲ” ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ”ಸೇವೆ ಆರಂಭಿಸಲು ಅನುಮತಿ ಕೋರಿ ಆರೋಗ್ಯ ಇಲಾಖೆಯನ್ನು ಸಂಪರ್ಕಿಸಿದ್ದೇವೆ. ಒಳಾಂಗಣದ ಎಲ್ಲಾ ಸೇವೆ ಆರಂಭ ಮಾಡಿ ಎಂದು ಮನವಿ ಮಾಡಿದ್ದೇವೆ. ಸೆಪ್ಟೆಂಬರ್ 1ರಿಂದ ಸೇವೆ ಆರಂಭ ಮಾಡಬೇಕು ಎಂಬುದು ನಮ್ಮ ಗುರಿಯಾಗಿದೆ. ಸರ್ಕಾರದಿಂದ ಅಧಿಕೃತ ಮಾಹಿತಿ ಮತ್ತು ಅನುಮತಿ ಎರಡು ದಿನದಲ್ಲಿ ಬರಬಹುದು” ಎಂದು ತಿಳಿಸಿದ್ದಾರೆ.

ಕೊರೊನಾ ಮಾರ್ಗಸೂಚಿಯಂತೆ ನೂರಾರು ಜನರು ಸೇರುವ ಕಾರ್ಯಕ್ರಮಗಳಿಗೆ ಅವಕಾಶ ನೀಡಲಾಗುವುದಿಲ್ಲ. ಹತ್ತು-ಹದಿನೈದು ಜನರು ಸೇರಿ ಮಾಡುವಂತಹ ಧಾರ್ಮಿಕ ಸೇವೆ ನಡೆಸಲು ಮಾತ್ರ ಅವಕಾಶ ನೀಡುವ ಚಿಂತನೆ ಇದೆ. ಕೊರೊನಾ ನಿಯಮದ ಮಿತಿಯ ಒಳಗೆ ಎಲ್ಲಾ ಸೇವೆಗಳು ಇರುತ್ತದೆ” ಎಂದು ತಿಳಿಸಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.