ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶ

ನವದೆಹಲಿ: ಭಾರತದ 13ನೇ ರಾಷ್ಟ್ರಪತಿಯಾಗಿ, ದೇಶದ ಆರ್ಥಿಕ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಪ್ರಣಬ್ ಮುಖರ್ಜಿ (84) ಅವರ ಮೆದುಳು ಶಸ್ತ್ರಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ.

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು  ಆರೋಗ್ಯ ತಪಾಸಣೆಗಾಗಿ ಆರ್ಮಿ ರಿಸರ್ಚ್ ಮತ್ತು ರೆಫರ್ರೆಲ್ ಆಸ್ಪತ್ರೆಗೆ ಭೇಟಿ ನೀಡಿದ್ದ ವೇಳೆ ಕೋವಿಡ್ 19 ಪಾಸಿಟಿವ್ ದೃಢಪಟ್ಟಿತ್ತು.

ನಂತರ ಅವರ ಮೆದುಳಿನಲ್ಲಿ ಹೆಪ್ಪುಗಟ್ಟಿದ್ದ ಭಾರೀ ಪ್ರಮಾಣದ ರಕ್ತವನ್ನು ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆಯಲಾಗಿತ್ತು. ಬಳಿಕ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಅಲ್ಲದೇ ಅವರನ್ನು ವೆಂಟಿಲೇಟರ್ ನಲ್ಲಿ ಇಟ್ಟು ನಿಗಾವಹಿಸಲಾಗಿತ್ತು ಎಂದು ವರದಿ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.