ಕುವೆಂಪು ವಿವಿ ಪತ್ರಿಕೋದ್ಯಮ ವಿಭಾಗದ ಅಧ್ಯಕ್ಷರಾಗಿ ಡಾ.ಸತೀಶ್ ಕುಮಾರ್ ಅಂಡಿಂಜೆ ನೇಮಕ

ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಅಧ್ಯಕ್ಷರಾಗಿ ಅದೇ ವಿಭಾಗದಲ್ಲಿ ಸಹ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಡಾ.ಸತೀಶ್ ಕುಮಾರ್ ಅಂಡಿಂಜೆಯವರನ್ನು ಸೆಪ್ಟೆಂಬರ್ 1ರಿಂದ ಎರಡು ವರ್ಷಗಳ ಅವಧಿಗೆ ನೇಮಕ ಮಾಡಲಾಗಿದೆ.

ಮೂಲತಃ ಬೆಳ್ತಂಗಡಿ ತಾಲ್ಲೂಕಿನ ಅಂಡಿಂಜೆ ‘ವನಸಿರಿ’ಯ ಮುತ್ತಯ್ಯ ಪೂಜಾರಿ ಮತ್ತು ವಾರಿಜಾ ದಂಪತಿಗಳ ಪುತ್ರರಾಗಿರುವ ಇವರು ತಮ್ಮ ಆರಂಭಿಕ ಶಿಕ್ಷಣವನ್ನು ಅಂಡಿಂಜೆ, ಬಂಗಾಡಿ ಮತ್ತು ವೇಣೂರುಗಳಲ್ಲಿ ಪಡೆದರು. ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಪತ್ರಿಕೋದ್ಯಮ, ಮನಃಶಾಸ್ತ್ರ, ಕನ್ನಡ ಸಾಹಿತ್ಯ ವಿಷಯದಲ್ಲಿ ಬಿ.ಎ. ಪದವಿ ಶಿಕ್ಷಣವನ್ನು ಐದನೇ ರಾಂಕ್ ಪೂರೈಸಿದ್ದಾರೆ. ನಂತರ ಸ್ವಲ್ಪ ಸಮಯ ಹೊಸದಿಗಂತ ಪತ್ರಿಕೆಯಲ್ಲಿ ಉಪಸಂಪಾದಕರಾಗಿ ಕಾರ್ಯನಿರ್ವಹಿಸಿದ ಇವರು ಮಂಗಳೂರು ವಿಶ್ವವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪ್ರಥಮ ರ್‍ಯಾಂಕ್ ಹಾಗೂ ಚಿನ್ನದ ಪದಕದೊಂದಿಗೆ ಪಡೆದರು. ಸ್ನಾತಕೋತ್ತರ ಶಿಕ್ಷಣ ಪಡೆಯುವ ಅವಧಿಯಲ್ಲಿ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮದಡಿ ನಾರ್ವೆ ದೇಶದ ವೋಲ್ಡಾ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ಟೆಲಿವಿಷನ್ ಸುದ್ದಿ ನಿರ್ಮಾಣದ ತರಬೇತಿ ಪಡೆದಿರುತ್ತಾರೆ. 

ಹವ್ಯಾಸಿ ಬರಹಗಾರರಾಗಿರುವ ಇವರ 250ಕ್ಕೂ ಹೆಚ್ಚು ಲೇಖನ, ನುಡಿಚಿತ್ರ, ಸಣ್ಣಕಥೆಗಳು ಕನ್ನಡ, ಇಂಗ್ಲೀಷ್ ಮತ್ತು ತುಳು ಭಾಷೆಗಳಲ್ಲಿ 30ಕ್ಕೂ ಹೆಚ್ಚು ಪತ್ರಿಕೆಗಳು ಮತ್ತು ನಿಯತಕಾಲಿಕಗಳಲ್ಲಿ ಪ್ರಕಟಗೊಂಡಿವೆ. ಇವರ ಭಾಷಣ ಹಾಗೂ ಸಣ್ಣ ಕಥೆಗಳು ಮಂಗಳೂರು ಮತ್ತು ಭದ್ರಾವತಿ ಆಕಾಶವಾಣಿ ಕೇಂದ್ರಗಳಿಂದ ಪ್ರಸಾರಗೊಂಡಿವೆ

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.