ಮಧುಮೇಹ ಮತ್ತು ರಕ್ತದೊತ್ತಡ ರೋಗಿಗಳಿಗಾಗಿ ಹಮ್ಮಿಕೊಂಡಿರುವ ಯೋಗ ಪ್ರಕೃತಿ ಚಿಕಿತ್ಸೆಯ ಕರಪತ್ರ ಬಿಡುಗಡೆ

ಉಜಿರೆ: ಶ್ರೀ.ಧ.ಮಂ ಪ್ರಕೃತಿ ಚಿಕಿತ್ಸಾ ಹಾಗೂ ಯೋಗ ವಿಜ್ಞಾನ ಮಹಾವಿದ್ಯಾಲಯ ಉಜಿರೆ ಮತ್ತು ರೋಟರಿ ಕ್ಲಬ್ ಬೆಳ್ತಂಗಡಿ ಇವರ ಸಹಯೋಗದಲ್ಲಿ ಪಾಸಿಟಿವ್ ಹೆಲ್ತ್ ಕಾರ್ಯಕ್ರಮದ ಅಡಿಯಲ್ಲಿ ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ರೋಗಿಗಳಿಗಾಗಿ ಧರ್ಮಸ್ಥಳದ ಶಾಂತಿವನ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿರುವ 11 ದಿನಗಳ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸೆಯ ಕರಪತ್ರ ವನ್ನು ಫೆ.5ರಂದು ಶಿಕ್ಷಕರ ದಿನಾಚರಣೆಯಂದು ಉಜಿರೆ ಶ್ರೀ. ಧ.ಮಂ ಪ್ರಕೃತಿ ಚಿಕಿತ್ಸಾ ಹಾಗೂ ಯೋಗ ವಿಜ್ಞಾನ ಮಹಾವಿದ್ಯಾಲಯದಲ್ಲಿ ಬಿಡುಗಡೆ ಗೊಳಿಸಲಾಯಿತು.

ರೋಟರಿ ಕ್ಲಬ್ ಜಿಲ್ಲಾ ಸಹಾಯಕ ಗವರ್ನರ್ ಮತ್ತು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಮತ್ತು ಶ್ರೀ.ಧ.ಮಂ ಪ್ರಕೃತಿ ಚಿಕಿತ್ಸಾ ಹಾಗೂ ಯೋಗ ವಿಜ್ಞಾನ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಪ್ರಶಾಂತ್ ಶೆಟ್ಟಿ ಕರಪತ್ರ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ವಕೀಲ ಬಿ.ಕೆ ಧನಂಜಯ ರಾವ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕಾರ್ಯದರ್ಶಿ ರೋ. ಶ್ರೀಧರ ಕೆ.ವಿ, ಪ್ರಕೃತಿ ಚಿಕಿತ್ಸಾ ಹಾಗೂ ಯೋಗ  ವಿಜ್ಞಾನ ಮಹಾವಿದ್ಯಾಲಯದ ಪ್ರೊಪೆಸರ್ ಗಳಾದ ಡಾ.ಶಿವಪ್ರಸಾದ್ ಶೆಟ್ಟಿ, ಡಾ. ಸುಜಾತ ದಿನೇಶ, ಡಾ. ಗೀತಾ ಬಿ ಶೆಟ್ಟಿ, ಮೊದಲಾದವರು ಹಾಜರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.