HomePage_Banner_
HomePage_Banner_

ಸೆ.11: ರೈತ ದಲಿತ ಕಾರ್ಮಿಕ ಜನಪರ ಚಳುವಳಿಗಳ ಒಕ್ಕೂಟದ ಜಿಲ್ಲಾ ಮಟ್ಟದ ವಿಚಾರಗೋಷ್ಠಿ, ಸಂವಾದ

ಬೆಳ್ತಂಗಡಿ: ರೈತ ದಲಿತ ಕಾರ್ಮಿಕ ಜನಪರ ಚಳುವಳಿಗಳ ಒಕ್ಕೂಟ ದ.ಕ ಇದರ ಆಶ್ರಯದಲ್ಲಿ ಭೂ ಸುಧಾರಣೆ ಕಾಯಿದೆ, ಎಪಿಎಂಸಿ ಕಾಯಿದೆ, ಕಾರ್ಮಿಕ ಕಾಯಿದೆ, ಅಗತ್ಯ ಸರಕುಗಳ ಕಾಯಿದೆಗಳ ತಿದ್ದುಪಡಿ, ವಿದ್ಯುತ್ ಖಾಸಗೀಕರಣ ಹಾಗೂ ಮೇಲ್ಜಾತಿಯವರಿಗೆ 10 ಶೇಕಡಾ ಮೀಸಲಾತಿ ಈ ಕುರಿತು ಜಿಲ್ಲಾ ಮಟ್ಟದ ವಿಚಾರಗೋಷ್ಠಿ ಮತ್ತು ಸಂವಾದ ಸೆ.11 ರಂದು ಬಿ.ಸಿ ರೋಡ್‌ನ ಹೋಟೆಲ್ ರಂಗೋಲಿ ಸಭಾಭವನದಲ್ಲಿ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಅಧ್ಯಕ್ಷ ಓಸ್ವಲ್ಡ್ ಪ್ರಕಾಶ್ ಫೆರ್ನಾಂಡಿಸ್ ಹೇಳಿದರು.

ಅವರು ಸೆ.9 ರಂದು ಬೆಳ್ತಂಗಡಿ ಪತ್ರಿಕಾ ಭವನದಲ್ಲಿ ಕರೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡುತ್ತಾ ತಿಳಿಸಿದರು. ಕೊರೊನಾ ವೈರಸ್ ದಾಳಿಯಿಂದ ಇಡೀ ದೇಶವೇ ಲಾಕ್ ಡೌನ್‌ನಿಂದ ಜನತೆ ಭಯದಿಂದ ಕಂಗೆಟ್ಟಿರುವ ಸಮಯದಲ್ಲಿ ಜನರ ಆರೋಗ್ಯಕ್ಕೆ ಪೂರಕವಾದ ಯೋಜನೆ ರೂಪಿಸುವ ಬದಲು ರೈತ ಕಾರ್ಮಿಕ ಹಾಗೂ ಜನ ವಿರೋಧಿ ಭೂ ಸುಧಾರಣೆ ಕಾಯ್ದೆ ರಾಜ್ಯ ಮತ್ತು ಕೇಂದ್ರ ಸರ್ಕಾರ ಮಾಡುತ್ತಿದೆ. ಇದರ ವಿರುದ್ಧ ಹೋರಾಟ ಮಾಡುವರೇ ಜಿಲ್ಲಾ ಮಟ್ಟದ ವಿಚಾರಗೋಷ್ಠಿ ಮತ್ತು ಸಂವಾದ ನಡೆಸಲಾಗುವುದು.

ದಲಿತಾ ಸೇವಾ ಸಮಿತಿ ಸಿಐಟಿಯು ತಾಲೂಕು ಅಧ್ಯಕ್ಷ ಶೇಖರ .ಎಲ್ ಮಾತನಾಡುತ್ತಾ ಕೇಂದ್ರ ಮತ್ತು ರಾಜ್ಯ ಸರಕಾರ ಹಲವು ರೈತ ವಿರೋಧಿ ಕಾನೂನು ಹೊರಡಿಸಿ ಜನ ಸಾಮಾನ್ಯರಿಗೆ ತೊಂದರೆ ನೀಡಿದೆ. ಈ ವಿಚಾರಗೋಷ್ಠಿಯ ಮುಖೇನಾ ಸಮಸ್ಯೆಯನ್ನು ಚರ್ಚಿಸಿ ಹೋರಾಟ ಮಾಡಲಾಗುವುದು ಎಂದರು. ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಅಧ್ಯಕ್ಷ ಸುಧಾಕರ ಜೈನ್, ತಾಲೂಕು ಕಾರ್ಯದರ್ಶಿ ಕೆ.ಎಂ ರಮ್ಲ ಪೆಜಕೊಡಂಗೆ, ದಲಿತಾ ಸೇವಾ ಸಮಿತಿ ಸಿಐಟಿಯು ಪ್ರಧಾನ ಕಾರ್ಯದರ್ಶಿ ವಸಂತ ನಡ, ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಅಧ್ಯಕ್ಷ ಕೆ. ನೇಮಿರಾಜ ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.