ಮಾಲಾಡಿ ಗ್ರಾ.ಪಂ ಸಭಾಭವನದಲ್ಲಿ ಪೋಷಣ್ ಅಭಿಯಾನ ಮಾಸಾಚರಣೆ

Advt_NewsUnder_1
Advt_NewsUnder_1
Advt_NewsUnder_1

ಮಾಲಾಡಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಗ್ರಾ.ಪಂ. ಮಾಲಾಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆ ಬೆಳ್ತಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ ಸೆ.14 ರಂದು ಮಾಲಾಡಿ ಗ್ರಾ.ಪಂ ಸಭಾಭವನದಲ್ಲಿ ಪೋಷಣ್ ಅಭಿಯಾನ ಮಾಸಾಚರಣೆ ಕಾರ್ಯಕ್ರಮ ನಡೆಯಿತು.


ಪಂ. ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಪಾಟೀಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಾಲಾಡಿ ಉ.ಹಿ.ಪ್ರಾ. ಶಾಲೆಯ ಮುಖ್ಯೋಪಾಧ್ಯಾಯಿನಿ ಲತಾ.ಕೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪಡಂಗಡಿ ವಲಯ ಮೇಲ್ವಿಚಾರಕಿ ಯಶೋಧ ಪೋಷಣ ಅಭಿಯಾನದ ಕುರಿತು ಪ್ರಾಸ್ತಾವಿಕ ಭಾಷಣ ಮಾಡಿದರು. ಪಡಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಸಹಾಯಕಿ ಪ್ರಿಯಾ. ಎಸ್ ಪೌಷ್ಠಿಕ ಆಹಾರದ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಸ್ತ್ರೀ ಶಕ್ತಿ ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರು ಉಪಸ್ಥಿತರಿದ್ದರು. ಊರ್ಲ ಅಂಗನವಾಡಿ ಕಾರ್ಯಕರ್ತೆ ಶಾಂತಿ ಸ್ವಾಗತಿಸಿ, ಪುರಿಯ ಅಂಗನವಾಡಿ ಕಾರ್ಯಕರ್ತೆ ಮೋಹಿನಿ ಕಾರ್ಯಕ್ರಮ ನಿರೂಪಿಸಿ, ಮಾಲಾಡಿ ಅಂಗನವಾಡಿ ಕಾರ್ಯಕರ್ತೆ ಪ್ರಭಾವತಿ ಧನ್ಯವಾದವಿತ್ತರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.