235.20 ಕಿ.ಮೀ ಗ್ರಾಮೀಣ ರಸ್ತೆಗಳು ಮೇಲ್ದಜೆ೯ಗೆ: ಶಾಸಕ ಹರೀಶ್ ಪೂಂಜ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಲೋಕೋಪಯೋಗಿ ಇಲಾಖೆ ವ್ಯಾಪ್ತಿಗೆ ಸೇರಿದ 16 ಗ್ರಾಮೀಣ ರಸ್ತೆಗಳ 235.20 ಕಿ.ಮೀ ಗ್ರಾಮೀಣ ರಸ್ತೆಯನ್ನು ಮೇಲ್ದರ್ಜೆರಿಸಿ, ಜಿಲ್ಲಾ ಮುಖ್ಯ ರಸ್ತೆಯಾಗಿ ಸರಕಾರ ಆದೇಶ ಹೊರಡಿಸಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದರು.

ಅವರು ಸೆ.19ರಂದು ಉಜಿರೆ ಜನಾರ್ದನ ದೇವಸ್ಥಾನ ಬಳಿಯ ಕೃಷ್ಣಾನುಗ್ರಹ ಸಭಾಂಗಣದಲ್ಲಿ ಕರೆದ ಪತ್ರಿಕಾಗೋಷ್ಠಿನ್ನು ಉದ್ದೇಶಿಸಿ ಮಾತನಾಡಿದರು. ಗ್ರಾಮೀಣ ರಸ್ತೆಗಳ ಅಭಿವೃದ್ಧಿಯಿಂದ ನಗರಕ್ಕೆ ಸಂಪರ್ಕ ಜಿಲ್ಲಾ ಮತ್ತು ತಾಲೂಕು ಕೇಂದ್ರದ ಸಂಪರ್ಕದಿಂದ ಗ್ರಾಮೀಣ ಜನತೆಗೆ ಪ್ರಯೋಜನವಾಗಲಿದೆ. ನಮ್ಮ ತಾಲೂಕಿನಲ್ಲಿ ಈ ಹಿಂದೆ 47 ಕಿ.ಮೀ ರಾಷ್ಟ್ರೀಯ ಹೆದ್ದಾರೆ, 96.70 ಕಿ.ಮೀ, ರಾಜ್ಯ ಹೆದ್ದಾರಿ 105.15 ಕಿ.ಮೀ ನಷ್ಟು, ಜಿಲ್ಲಾ ಮುಖ್ಯ ರಸ್ತೆ 1982.20 ಕಿ.ಮೀನಷ್ಟು ಗ್ರಾಮೀಣ ರಸ್ತೆಗಳಿವೆ. ಈ ಪೈಕಿ 235.20 ಕಿ.ಮೀ ಗ್ರಾಮೀಣ ರಸ್ತೆಯನ್ನು ಜಿಲ್ಲಾ ಮುಖ್ಯ ರಸ್ತೆಯಾಗಿ ಮೇಲ್ದರ್ಜೆಗೇರಿಸಲಾಗಿದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಶಿವಪ್ರಸಾದ ಅಜಿಲ, ಜಿ.ಪಂ ಸದಸ್ಯರುಗಳಾದ ಕೊರಗಪ್ಪ ನಾಯ್ಕ, ಮಮತಾ ಎಂ. ಶೆಟ್ಟಿ, ಸೌಮ್ಯಲತಾ ಜಯಂತ ಗೌಡ, ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಶಶಿಧರ ಎಂ. ಕಲ್ಮಂಜ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.