ಬಳಂಜ ಬಿಲ್ಲವ ಸಂಘಕ್ಕೆ ಶಾಸಕ ಹರೀಶ್ ಪೂಂಜ ಬೇಟಿ ❇️ ಸಂಘದ ಕಾರ್ಯ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬಳಂಜ: ಸುಮಾರು 40 ವರ್ಷಗಳ ಇತಿಹಾಸವಿರುವ ಬಳಂಜ ಬಿಲ್ಲವ ಸಂಘ ಹಲವಾರು ಸಮಾಜಮುಖಿ ಕೆಲಸ ಕಾರ್ಯಗಳನ್ನು ಹಮ್ಮಿಕೊಂಡು ಜಿಲ್ಲೆಯಲ್ಲಿ ಗುರುತಿಸಿಕೊಂಡಿದ್ದು ಸಂಘಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಬೇಟಿ ನೀಡಿ ಸಂಘದ ಕಾರ್ಯಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ

ರೂ 1 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಸಭಾಭವನಕ್ಕೆ ಸರಕಾರದಿಂದ ಹೆಚ್ಚಿನ ಅನುದಾನ ಮಂಜೂರುಗೊಳಿಸಿ ಕೊಡುವ ಭರವಸೆ ನೀಡಿದರು.
ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ಶಾಸಕರನ್ನ ಅತ್ಮೀಯವಾಗಿ ಬರಮಾಡಿಕೊಂಡು ಸ್ವಾಗತಿಸಿ, ಹೂ ಹಾರ ಹಾಕಿ ಗೌರವಿಸಿದರು.


ಈ ಸಂದರ್ಭದಲ್ಲಿ ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಮಾಜಿ ಅಧ್ಯಕ್ಷ ಸೋಮನಾಥ ಬಂಗೇರ ವರ್ಪಾಳೆ,ಪ್ರಮುಖರಾದ ಸದಾನಂದ ಪೂಜಾರಿ ಉಂಗೀಲಬೈಲು,ಸುದೀರ್ ಆರ್ ಸುವರ್ಣ, ರಂಜಿತ್ ಹೆಚ್ ಡಿ,ಸಂತೋಷ್ ಪಿ ಕೋಟ್ಯಾನ್ ಬಳಂಜ,ಸುರೇಶ್ ಪೂಜಾರಿ ಜೈಮಾತಾ, ರತ್ಕಾಕರ್, ಹಾಗೂ ಇತರರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.