ಬೆಳ್ತಂಗಡಿ: ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಮುಂಜಾಗ್ರತೆಯ ಕ್ರಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸುವ ನಿಟ್ಟಿನಲ್ಲಿ ಮಾಸ್ಕ್ ಧರಿಸದವರ ವಿರುದ್ಧ ನ.ಪಂ. ಮುಖ್ಯಾಧಿಕಾರಿ ಮತ್ತು ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 10 ಜನರಿಗೆ ರೂ 1900 ರುಪಾಯಿ ದಂಡ ವಿಧಿಸಿದ್ದಾರೆ.
ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಸೆ.25 ರಂದು ನಡೆಸಿದ ಕಾರ್ಯಾಚರಣೆಯಲ್ಲಿ ನ.ಪಂ. ಮುಖ್ಯಾಧಿಕಾರಿ ಸುಧಾಕರ್, ಇಂಜಿನಿಯರ್ ಮಹಾವೀರ್ ಜೈನ್ ಮತ್ತು ನಗರ ಪಂಚಾಯತ್ ಸಿಬ್ಬಂದಿಗಳು ಹಾಗೂ ಪೊಲೀಸರು ಕಾರ್ಯಾಚರಣೆ ನಡೆಸಿದರು.