ಸಿಪಿಎಂ ವತಿಯಿಂದ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ತಿದ್ದುಪಡಿಗೆ ವಿರೋಧ ಪ್ರತಿಭಟನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಕರ್ನಾಟಕ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ತಿದ್ದುಪಡಿ ಮಸೂದೆಗಳನ್ನು ಜಾರಿಗೊಳಿಸುವ ಮೂಲಕ ಕೇಂದ್ರ ಮತ್ತು ರಾಜ್ಯ ಸರಕಾರದ ವಿರುದ್ದ ರೈತ, ಕಾರ್ಮಿಕ, ದಲಿತ ಸಂಘಟನೆಗಳು ಹಮ್ಮಿಕೊಂಡಿರುವ ಪ್ರತಿಭಟನೆಗೆ ಸೆ.28ರಂದು ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಸಿ.ಪಿ.ಎಂ ತಾಲೂಕು ಸಮಿತಿ ಮತ್ತು ರೈತ ಕಾರ್ಮಿಕ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಸಿ.ಪಿ.ಎಂ ಬೆಳ್ತಂಗಡಿ ತಾಲೂಕು ಕಾರ್ಯದರ್ಶಿ ಶಿವಕುಮಾರ್, ರೈತಸಂಘ(ಹಸಿರುಸೇನೆ) ಜಿಲ್ಲಾಧ್ಯಕ್ಷ ಸುರೇಶ್ ಭಟ್, ಕಾರ್ಮಿಕ ಮತ್ತು ದಲಿತ ಮುಖಂಡ ಶೇಖರ ಎಲ್ ಮಾತನಾಡಿ ಈ ಮಸೂದೆ ತಿದ್ದುಪಡಿಯಿಂದ ಕಾರ್ಮಿಕರಿಗೆ, ರೈತರಿಗೆ ಸಮಸ್ಯೆಯಾಗಲಿದ್ದು ಕಾರ್ಮಿಕ ವರ್ಗಕ್ಕೆ ಅನ್ಯಾಯವಾಗಲಿರುವುದರಿಂದ ಎಲ್ಲಾ ಸಂಘಗಳು ಭೂ ಸುಧಾರಣೆ ಕಾಯ್ದೆ ಮತ್ತು ಎಪಿಎಂಸಿ ತಿದ್ದುಪಡಿಗೆ ವಿರೋಧವಾಗಿ ಪ್ರತಿಭಟನೆ ನಡೆಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರಾದ ರಮ್ಲಾ, ಬಾಲಕೃಷ್ಣ ಹೊಳ್ಳ, ಸುಕನ್ಯಾ, ಸುಜಿತ್, ಶ್ವೇತಾ, ಸುಧಾ ಕೆ ರಾವ್, ಕುಸುಮ, ಶ್ರೀಧರ್ ಮೊದಲಾದವರು ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.