ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮಕ್ಕೆ ಚಾಲನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದ ಅಡಿಯಲ್ಲಿ ಕಾಲುಬಾಯಿ ರೋಗ ನಿಯಂತ್ರಣ ಲಸಿಕೆ ಹಾಗೂ ಎನ್.ಎ.ಪಿ.ಹೆಚ್ ಕಿವಿಯೋಲೆ ಅಳವಡಿಕೆಯ ಅಭಿಯಾನಕ್ಕೆ ಸೆ.30 ರಂದು ಎಸ್.ಸಿ.ಡಿ.ಸಿ.ಸಿ ಸಭಾಂಗಣ ಬೆಳ್ತಂಗಡಿಯಲ್ಲಿ ಶಾಸಕ ಹರೀಶ್ ಪೂಂಜ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಕುಸುಮಾಧರ, ಜಿ.ಪಂ ಸದಸ್ಯರುಗಳಾದ ಕೊರಗಪ್ಪ ನಾಯ್ಕ, ಸೌಮ್ಯಲತಾ, ಜಿ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಮಮತಾ ಶೆಟ್ಟಿ, ತಾ.ಪಂ ಅಧ್ಯಕ್ಷೆ ದಿವ್ಯಜ್ಯೋತಿ, ಉಪಾಧ್ಯಕ್ಷೆ ವೇದಾವತಿ, ಸದಸ್ಯರಾದ ಅಮಿತಾ ಕುಶಾಲಪ್ಪ ಗೌಡ, ಕೊರಗಪ್ಪ ಗೌಡ, ಸುಧಾಕರ್, ಕೃಷ್ಣಯ್ಯ ಆಚಾರ್ಯ, ಮುಖ್ಯ ಪಶು ವೈಧ್ಯಾಧಿಕಾರಿ ಪಶು ಆಸ್ಪತ್ರೆ ಬೆಳ್ತಂಗಡಿಯ ಡಾ. ರವಿಕುಮಾರ್ ಎಮ್, ಹಾಗೂ ಧರ್ಮಸ್ಥಳ ಪಶು ವೈಧ್ಯಾಧಿಕಾರಿ ಜಯಕೀರ್ತಿ ಜೈನ್, ವಲಯದ ಪಶು ವೈಧ್ಯಾಧಿಕಾರಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.