ಬೆಳ್ತಂಗಡಿ : ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘ ಇದರ ವತಿಯಿಂದ ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರು ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಗಾಂಧಿ ಜಯಂತಿ ದಿನವಾದ ಇಂದು(ಅ.2) ತಾಲೂಕು ಮಟ್ಟದ ವಿವಿಧ ಇಲಾಖೆಗಳ ವಿರುದ್ಧ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಗುತ್ತಿಗೆ ನೌಕರರ ಸಂಘದ ಸಂಚಾಲಕ ಅಜೇಯ್ ಮಾತನಾಡಿ, ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಕಳೆದ ೧೫ ವರ್ಷಗಳಿಂದ ಕನಿಷ ವೇತನಕ್ಕೆ ಯಾವುದೇ ಇತರ ಸೌಲಭ್ಯ ವಿಲ್ಲದೆ ದುಡಿಯುತ್ತಿದ್ದು, ಇತ್ತೀಚೆಗೆ ಕೋವಿಡ್ ಸಮಯದಲ್ಲೂ ಪ್ರಾಣದ ಹಂಗು ತೊರೆದು ಕೆಲಸ ಮಾಡಿದರೂ ಸರಕಾರ ನಮ್ಮ ಬೇಡಿಕೆಗಳ ಬಗ್ಗೆ ಯಾವುದೇ ರೀತಿಯಲ್ಲಿ ಸ್ಪಂದಿಸಿಲ್ಲ ಎಂದು ಆರೋಪಿಸಿ, ಕೂಡಲೇ ಸರಕಾರ ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಗೌರವಾಧ್ಯಕ್ಷೆ ಡಾ ಸುಮ ನಂದಕುಮಾರ್, ಸಂಚಾಲಕರಾದ ಮಹಂತೇಶ್, ಹಮೀದ್, ಆಶಾ ಮೆಂಟರ್ ಹರಿಣಿ, ಗ್ರೂಪ್ ಡಿ ನೌಕರ ಉಮೇಶ್ ಹಾಗೂ ನೌಕರರು ಭಾಗವಹಿಸಿದ್ದರು.