ಬೆದ್ರಡ್ಡ-ದೈಪಾಲಬೆಟ್ಟು ರೂ.60 ಲಕ್ಷ ವೆಚ್ಚದ ಕಾಂಕ್ರಿಟ್ ರಸ್ತೆಗೆ ಶಿಲಾನ್ಯಾಸ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಗ್ರಾಮ ರಾಜ್ಯದ ಕಲ್ಪನೆ ಸಾಕಾರಗೊಳ್ಳುವ ಕಾಲ ಸನ್ನಿಹಿತ: ಹರೀಶ್ ಪೂಂಜ

ಮೂಡುಕೋಡಿ: ಗ್ರಾಮ ರಾಜ್ಯದ ಕಲ್ಪನೆ ಸಾಕಾರಗೊಳ್ಳುವ ಕಾಲ ಸನ್ನಿಹಿತವಾಗುತ್ತಿದೆ. ಗ್ರಾಮಗಳ ಅಭಿವೃದ್ಧಿ ಆದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಸರಕಾರದ ಪ್ರತಿಯೊಂದು ಸವಲತ್ತು ಸಿಗುವಂತೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.
ಅವರು ಮೂಡುಕೋಡಿ ಗ್ರಾಮದ ಬೆದ್ರಡ್ಡ -ದೈಪಾಲಬೆಟ್ಟು ರೂ.60 ಲಕ್ಷ ವೆಚ್ಚದ ರಸ್ತೆಯ ಕಾಂಕ್ರಿಟ್ ರಸ್ತೆಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಸಮಾರಂಭದಲ್ಲಿ ವೇಣೂರು ಗ್ರಾ.ಪಂ. ಅಧ್ಯಕ್ಷೆ ಶೋಭಾ ಹೆಗ್ಡೆ, ಉಪಾಧ್ಯಕ್ಷ ಅರುಣ್ ಕ್ರಾಸ್ತ, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಮೋಹನ್ ಅಂಡಿಂಜೆ, ಕಾರ್ಯದರ್ಶಿ ನಿತೀಶ್ ಗುಂಡೂರಿ ಗ್ರಾ.ಪಂ.ಸದಸ್ಯರಾದ ರಾಜೇಶ್ ಪೂಜಾರಿ ಮೂಡುಕೋಡಿ, ಹರೀಶ್ ಪಿ.ಎಸ್, ಲಕ್ಷ್ಮಣ ಪೂಜಾರಿ, ನೇಮಯ್ಯ ಕುಲಾಲ್, ಲೋಕಯ್ಯ ಪೂಜಾರಿ, ವೇಣೂರು ಸಿ.ಎ ಬ್ಯಾಂಕ್ ಅಧ್ಯಕ್ಷ ಸುಂದರ ಹೆಗ್ಡೆ, ಗ್ರಾಮ ಸಮಿತಿ ಅಧ್ಯಕ್ಷ ಧರ್ಮರಾಜ್ ಕೊಪ್ಪದ ಬಾಕಿಮಾರು, ಕಾರ್ಯದರ್ಶಿ ನಿಖಿಲ್ ಡಿ ಶೆಟಿ, ಸದಸ್ಯರಾದ ರಮೇಶ್ ಪೂಜಾರಿ, ಪ್ರಶಾಂತ್ ಗೌಡ, ಪ್ರಕಾಶ್ ಹೆಗ್ಡೆ ಉಪಸ್ಥಿತರಿದ್ದರು.
ನೀರು ನೈರ್ಮಲ್ಯ ಸಮಿತಿಯ ಸದಸ್ಯ ಅನೂಪ್ ಜೆ ಪಾಯಸ್ ಕಾರ್ಯಕ್ರಮ ನಿರೂಪಿಸಿದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.