ಬೆಳ್ತಂಗಡಿ: ಸೀತಾನದಿ ಗಣಪಯ್ಯ ಶೆಟ್ಟಿ ಪ್ರತಿಷ್ಠಾನದ 33ನೇ ವರ್ಷದ ಸೀತಾನದಿ ಗಣಪಯ್ಯ ಶೆಟ್ಟಿ ಸಂಸ್ಮರಣಾ ಕಾರ್ಯಕ್ರಮ ಅ.7 ರಂದು ನಿಡ್ಲೆ ಉಮೇಶ್ ಶೆಟ್ಟಿಯವರ ನಿವಾಸದಲ್ಲಿ ಜರುಗಿತು.
ಸೀತಾನದಿ ಗಣಪಯ್ಯ ಶೆಟ್ಟಿ ಪ್ರತಿಷ್ಠಾನದ ಅಧ್ಯಕ್ಷ ಕಿಶನ್ ಹೆಗ್ಡೆಯವರು ತೆಂಕು ತಿಟ್ಟಿನ ಅಗ್ರಮಾನ್ಯ ಕಲಾವಿದರಲ್ಲಿ ಓರ್ವರಾದ, ಪ್ರಚಲಿತ ಯಕ್ಷಗಾನದ ಹೆಸರಾಂತ ಕಲಾವಿದ ಉಬರಡ್ಕ ಉಮೇಶ್ ಶೆಟ್ಟಿಯವರಿಗೆ 2020ರ ಸಾಲಿನ ಪ್ರತಿಷ್ಠಿತ ಸೀತಾನದಿ ಗಣಪಯ್ಯ ಶೆಟ್ಟಿ ಸ್ಮರಣಾರ್ಥ ನೀಡಲ್ಪಡುವ ‘ಸೀತಾನದಿ ಗಣಪಯ್ಯ ಶೆಟ್ಟಿ ಪ್ರಶಸ್ತಿ’ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಪ್ರತಿಷ್ಠಾನದ ಉಪಾಧ್ಯಕ್ಷ ಎಸ್.ಜಯರಾಮ ಶೆಟ್ಟಿ, ಉದಯ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
ಪ್ರಕಾಶ್ ಶೆಟ್ಟಿ ಸ್ವಾಗತಿಸಿ, ಭುವನ ಕುಮಾರ್ ಧನ್ಯವಾದವಿತ್ತರು. ರಘುರಾಮ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.