ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ರಮಾನಂದ ಸಾಲ್ಯಾನ್‌ರಿಗೆ ಶ್ರದ್ಧಾಂಜಲಿ

ಬೆಳ್ತಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ಮಾಜಿ ಅಧ್ಯಕ್ಷ, ಖ್ಯಾತ ಉದ್ಯಮಿ, ಇತ್ತೀಚೆಗೆ ನಿಧನರಾದ ಕೆ.ರಮಾನಂದ ಸಾಲ್ಯಾನ್ ರವರಿಗೆ ಸಂಘದ ವತಿಯಿಂದ ಶ್ರದ್ಧಾಂಜಲಿ ಸಭೆ ಅ.10 ರಂದು ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಶ್ರೀ ಗುರುನಾರಾಯಣ ಸೇವಾ ಸಂಘದ ಅಧ್ಯಕ್ಷ ಪದ್ಮನಾಭ ಮಾಣಿಂಜ ವಹಿಸಿದ್ದರು. ಸಂಘದ ಮಾಜಿ ಅಧ್ಯಕ್ಷ ನೋಟರಿ ನ್ಯಾಯವಾದಿ ಭಗೀರಥ ಜಿ ನುಡಿ ನಮನ ಸಲ್ಲಿಸಿ ಮಾತನಾಡಿ, ರಮಾನಂದ ಸಾಲ್ಯಾನ್‌ರವರು ಸಂಘದ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿದ್ದ ಸಮಾಜದ ಓರ್ವ ಧೀಮಂತ ನಾಯಕನನ್ನು ಕಳೆದುಕೊಂಡಿದ್ದೇವೆ ಎಂದರು.
ಸಂಘದ ಗೌರವಾಧ್ಯಕ್ಷ, ಮಾಜಿ ಶಾಸಕ ಕೆ.ವಸಂತ ಬಂಗೇರ, ಉಪಾಧ್ಯಕ್ಷ ಮನೋಹರ ಇಳಂತಿಲ, ಕಾರ್ಯದರ್ಶಿ ನಾರಾಯಣ ಸುವರ್ಣ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ರಂಜಿತ್ ಹೆಚ್ ಡಿ, ಸಂಘದ ಮಾಜಿ ಅಧ್ಯಕ್ಷರುಗಳಾದ ಯೋಗೀಶ್ ಕುಮಾರ್ ನಡಕ್ಕರ, ಜಯರಾಮ ಬಂಗೇರ ಹೇರಾಜೆ, ಬಿಲ್ಲವ ಮಹಿಳಾ ವೇದಿಕೆಯ ಸ್ಥಾಪಕ ಅಧ್ಯಕ್ಷೆ ಸುಜಿತಾ ವಿ ಬಂಗೇರ, ಮಾಜಿ ಅಧ್ಯಕ್ಷೆ ವಿನೋದಿನಿ ರಾಮಪ್ಪ, ಸಂಘದ ನಿರ್ದೇಶಕರುಗಳು ಉಪಸ್ಥಿತರಿದ್ದರು.
ಮೃತರ ಸದ್ಗತಿಗಾಗಿ ಒಂದು ನಿಮಿಷದ ಮೌನ ಪ್ರಾರ್ಥನೆ ಸಲ್ಲಿಸಿ, ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.