ಧರ್ಮಸ್ಥಳದಲ್ಲಿ ಬೃಹತ್ ರಕ್ತದಾನ ಶಿಬಿರ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಧರ್ಮಸ್ಥಳ : ಸೇವಾಭಾರತಿ ಕನ್ಯಾಡಿ -II ಇದರ ಆಶ್ರಯದಲ್ಲಿ ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇದರ ಸಹಕಾರದೊಂದಿಗೆ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ, ಲೇಡಿಗೋಷನ್ ಆಸ್ಪತ್ರೆ ಮಂಗಳೂರು, ವೀರ ಕೇಸರಿ, ಬೆಳ್ತಂಗಡಿ, ಯುವ ಚಿಗುರು ವಾಟ್ಸಪ್ ಗ್ರೂಪ್ಸ್ ಹಾಗೂ ರೋಟರಿ ಕ್ಲಬ್ ಬೆಳ್ತಂಗಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಅ.10 ರಂದು ಧರ್ಮಸ್ಥಳದ ಕಲ್ಲೇರಿ ‘ಅಟಲ್‌ಜೀ ಸಭಾಭವನ’ದಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಿತು.
ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷ ಬಿ. ಹರಿದಾಸ ಗಾಂಭೀರ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಶುಭ ಹಾರೈಸಿದರು. ಕನ್ಯಾಡಿ ಸೇವಾ ಭಾರತಿ ಅಧ್ಯಕ್ಷ ಕೆ. ವಿನಾಯಕ ರಾವ್ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಮಂಗಳೂರು ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಜಿಲ್ಲಾ ಸಂಚಾಲಕ ಪ್ರವೀಣ್ ಕುಮಾರ್, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಬಿ. ಕೆ. ಧನಂಜಯ ರಾವ್, ಬೆಳ್ತಂಗಡಿ ವೀರ ಕೇಸರಿ ಉಪಾಧ್ಯಕ್ಷ ಸುಧಾಕರ್, ಯುವಚಿಗುರು ವಾಟ್ಸಪ್ ಗ್ರೂಪ್ ಅಡ್ಮಿನ್ ಹರೀಶ್ ಸುವರ್ಣ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಆರೋಗ್ಯ ಭಾರತಿ ಅಧ್ಯಕ್ಷ ಶ್ರೀಧರ್ ಕೆ.ವಿ ಸ್ವಾಗತಿಸಿ, ಕಾರ್ಯದರ್ಶಿ ನವೀನ್ ಕನ್ಯಾಡಿ ಕಾರ್ಯಕ್ರಮ ನಿರೂಪಿಸಿ, ವೀರಕೇಸರಿ ಉಪಾಧ್ಯಕ್ಷ ಸುಧಾಕರ್ ವಂದಿಸಿದರು. ಶಿಬಿರದಲ್ಲಿ ಒಟ್ಟು 116 ಯೂನಿಟ್ ರಕ್ತ ಸಂಗ್ರಹಿಸಲಾಯಿತು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.