ನಗರ ಸಭೆ ಮೀಸಲಿಗೆ ಹೈಕೋರ್ಟ್ ತಡೆಯಾಜ್ಞೆ: ಪಟ್ಟಣ ಪಂಚಾಯತ್-ಪುರಸಭೆಗೆ ಅನ್ವಯವಿಲ್ಲ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ರಾಜ್ಯದ 59 ನಗರ ಸಭೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳ ಮೀಸಲು ನಿಗದಿಪಡಿಸಿ ರಾಜ್ಯ ಸರಕಾರ ನೀಡಿದ ಆದೇಶಕ್ಕೆ ಹೈಕೋರ್ಟು ಅ.15ರಂದು ಮಧ್ಯಂತರ ತಡೆ ನೀಡಿದ್ದು, ಈ ಆದೇಶ ಪಟ್ಟಣ ಪಂಚಾಯತ್ ಮತ್ತು ಪುರಸಭೆ ಮೀಸಲಾತಿಗೆ ಅನ್ವಯವಾಗುವುದಿಲ್ಲ ಎಂದು ತಿಳಿಸಿದೆ.
ಇದರಿಂದಾಗಿ ಬೆಳ್ತಂಗಡಿ ಪಟ್ಟಣ ಪಂಚಾಯತದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಮೀಸಲಾತಿಯಲ್ಲಿ ಯಾವುದೇ ಬದಲಾವಣೆ ಇಲ್ಲದೆ ಶೀಘ್ರವಾಗಿ ಚುನಾವಣೆ ನಡೆದು ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ನಡೆಯಲಿದೆ. ಸರಕಾರ ಅ.8ರಂದು ಪ್ರಕಟಿಸಿದ್ದ ಮೀಸಲಾತಿಗೆ ಸಂಬಂಧಿಸಿದಂತೆ ಹಾಸನ ನಗರ ಸಭೆಯ 21 ಮಂದಿ ಸದಸ್ಯರು ಅಧ್ಯಕ್ಷ ಸ್ಥಾನವನ್ನು ಎಸ್ಟಿಗೆ ನಿಗದಿ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ರಾಜ್ಯ ಹೈಕೋರ್ಟು ಅಧಿಸೂಚನೆಗೆ ತಡೆ ನೀಡಿ, ಈ ಆದೇಶ ಪುರಸಭೆ ಮತ್ತು ಪಟ್ಟಣ ಪಂಚಾಯತ್ ಮೀಸಲಾತಿಗೆ ಅನ್ವಯವಾಗುವುದಿಲ್ಲ. ಅಲ್ಲದೆ ನಗರ ಸಭೆಗಳ ಮೀಸಲು ಸಂಬಂಧ ಪರಿಶೀಲನೆ ನಡೆಸಲು ಹೆಚ್ಚುವರಿ ಅಡ್ವೊಕೇಟ್‍ರನ್ನು ಒಳಗೊಂಡ ತ್ರಿಸದಸ್ಯ ಸಮಿತಿ ರಚಿಸಿ ಅ.22ರ ಒಳಗೆ ಕರಡು ವರದಿ ಸಲ್ಲಿಸಲು ಆದೇಶ ನೀಡಿದೆ.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.