ಔಟ್‌ಲುಕ್‌ನಿಂದ ಅತ್ಯುತ್ತಮ ಕಾಲೇಜುಗಳ ಸಮೀಕ್ಷೆ: ಉಜಿರೆ ಶ್ರೀ ಧ.ಮಂ.ಕಾಲೇಜಿನ ವಿವಿಧ ವಿಭಾಗಗಳಿಗೆ ಉನ್ನತ ಸ್ಥಾನ

ಉಜಿರೆ: ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಿವಿಧ ವಿಭಾಗಗಳಿಗೆ ರಾಷ್ಟ್ರಮಟ್ಟದ ಪ್ರಸಿದ್ಧ ಔಟ್‌ಲುಕ್ ಪತ್ರಿಕೆಯು ನಡೆಸಿದ ಅತ್ಯುತ್ತಮ ಕಾಲೇಜುಗಳ ಸಮೀಕ್ಷೆಯಲ್ಲಿ ಉನ್ನತ ಶ್ರೇಣಿ ಲಭಿಸಿದೆ.
ಈ ಸಮೀಕ್ಷೆಯಲ್ಲಿ ಉಜಿರೆ ಶ್ರೀ ಧ.ಮಂ.ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗಕ್ಕೆ 13ನೇ ಸ್ಥಾನ, ಬಿಸಿಎಗೆ 17ನೇ ಸ್ಥಾನ, ಸಮಾಜಕಾರ್ಯಕ್ಕೆ 22ನೇ ಸ್ಥಾನ, ಬಬಿಎ 32 ನೇ ಸ್ಥಾನವಿಜ್ಞಾನ ವಿಭಾಗಕ್ಕೆ 47ನೇ ಸ್ಥಾನ, ಕಲಾ ವಿಭಾಗಕ್ಕೆ 68ನೇ ಹಾಗೂ ವಾಣಿಜ್ಯ ವಿಭಾಗಕ್ಕೆ 89ನೇ ಸ್ಥಾನ ಲಭಿಸಿದೆ.
ಕಾಲೇಜಿನ ವಿವಿಧ ವಿಭಾಗಗಳ ಶೈಕ್ಷಣಿಕ ಚಟುವಟಿಕೆ, ಸಾಧನೆ ಪಡೆದ ಮನ್ನಣೆ ವಿದ್ಯಾರ್ಥಿಗಳ ಪ್ರವೇಶಾತಿ ಪ್ರಮಾಣ, ಪರೀಕ್ಷಾ ಫಲಿತಾಂಶ, ಶುಲ್ಕ ವಿವರ, ಲಭ್ಯವಿರುವ ಸೌಲಭ್ಯಗಳು ಹಾಗೂ ಕಾಲೇಜಿನಲ್ಲಿರುವ ವಿದ್ಯಾರ್ಥಿಗಳ ಶೈಕ್ಷಣಿಕ, ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಸೌಲಭ್ಯಗಳು ಹಾಗೂ ಕ್ರೀಡೆ, ಸಾಂಸ್ಕೃತಿಕ ಸಾಹಿತ್ಯಿಕ ಚಟುವಟಿಕೆಗಳಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಪಡೆದ ಪ್ರಶಸ್ತಿಗಳು ಸಂಶೋಧನಾ ಚಟುವಟಿಕೆಗಳು ಮುಂತಾದ ಸಮಗ್ರ ವರದಿಯನ್ನಾಧರಿಸಿ ಈ ಸಮೀಕ್ಷೆ ನಡೆಸಲಾಗಿತ್ತು.
ಕಾಲೇಜಿಗೆ ಉನ್ನತ ಶ್ರೇಣಿ ಲಭಿಸಿದ ಬಗ್ಗೆ ಶ್ರೀ ಧ.ಮಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಡಿ.ವೀರೇಂದ್ರ ಹೆಗ್ಗಡೆ, ಕಾರ್ಯದರ್ಶಿ ಹಷೇಂದ್ರ ಕುಮಾರ್ ಹಾಗೂ ಡಾ.ಬಿ ಯಶೋವರ್ಮ ರವರು ಹರ್ಷ ವ್ಯಕ್ತಪಡಿಸಿದ್ದಾರೆ.
ಆಡಳಿತ ಮಂಡಳಿಯ ಸೂಕ್ತ ಮಾರ್ಗದರ್ಶನ, ಪ್ರೋತ್ಸಾಹ, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳ ಸಹಕಾರ, ವಿದ್ಯಾರ್ಥಿಗಳ ಸಕ್ರಿಯ ಪಾಲ್ಗೊಳ್ಳುವಿಕೆಯಿಂದ ರಾಷ್ಟ್ರದಾದ್ಯಂತ ಈ ಮನ್ನಣೆ ದೊರೆಯಲು ಸಾಧ್ಯವಾಯಿತು ಎಂದು ಪ್ರಾಂಶುಪಾಲ ಡಾ.ಸತೀಶ್ಚಂದ್ರ ಎಸ್ ಅಭಿಪ್ರಾಯಪಟ್ಟಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.