ಪಿಲಾತಬೆಟ್ಟು ಸೇವಾ ಸಹಕಾರಿ ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಬೂಬ ಪೂಜಾರಿ ಹೃದಯಾಘಾತದಿಂದ ನಿಧನ

ಪುಂಜಾಲಕಟ್ಟೆ: ಮೂಲತಃ ಬಂಟ್ವಾಳ ತಾಲೂಕಿನ ಕೊಡಂಬೆಟ್ಟು ಗ್ರಾಮದ ಕುಂದ್ಕಂದೋಡಿ ನಿವಾಸಿಯಾಗಿದ್ದು, ಪಿಲಾತಬೆಟ್ಟು ವ್ಯವಸಾಯ ಸೇವಾ ಸಹಕಾರಿ ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಬೂಬ ಪೂಜಾರಿ(67.ವ)ಯವರು ಹೃದಯಾಘಾತದಿಂದ ಅ.17 ರಂದು ನಿಧನರಾದರು.
ಇವರು ಸುಮಾರು 40 ವರ್ಷಗಳಿಂದ ಪುಂಜಾಲಕಟ್ಟೆ ಬಳಿ ಇರುವ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ನಂತರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು.
ಇವರು ಹಲವು ಸಂಘ ಸಂಸ್ಥೆಗಳಲ್ಲಿ, ಧಾರ್ಮಿಕ ಕ್ಷೇತ್ರಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದು. ಎಲ್ಲರಿಗೂ ಚಿರಪರಿಚಿತರಾಗಿದ್ದರು. ಮೃತರು ಪತ್ನಿ, ಓರ್ವ ಪುತ್ರ , ಇಬ್ಬರು ಪುತ್ರಿಯರು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.