HomePage_Banner_
HomePage_Banner_

ಬೆಳ್ತಂಗಡಿ ಕಾಂಗ್ರೆಸ್ ಬ್ಲಾಕ್ ಸಮಿತಿ (ನಗರ ಮತ್ತು ಗ್ರಾಮೀಣ )ವತಿಯಿಂದ ಪ್ರತಿಭಟನೆ

ಬೆಳ್ತಂಗಡಿ : ಸರಕಾರದ ವಿವಿಧ ಯೋಜನೆಗಳಡಿ ಮಂಜೂರುಗೊಂಡ ಹಣವನ್ನು ಫಲಾನುಭವಿಗಳ ಖಾತೆಗೆ ಬಿಡುಗಡೆಗೊಳಿಸದೆ ಸತಾಯಿಸುತ್ತಿರುವ ಸರಕಾರದ ಹಾಗೂ ಕ್ಷೇತ್ರದ ಶಾಸಕರ ಕಾರ್ಯವೈಖರಿ ವಿರುದ್ಧ ಹಾಗೂ ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ದಲಿತ ಬಾಲಕಿ ಮೇಲೆ ನಡೆದ ಅಮಾನವೀಯ ಅತ್ಯಾಚಾರ, ಹಿಂಸೆ, ಸಾವು ಘಟನೆಯನ್ನು ಖಂಡಿಸಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ ಅ.21 ರಂದು ಜರುಗಿತು.


ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ ವಸಂತ ಬಂಗೇರ, ಗ್ರಾಮೀಣ ಬ್ಲಾಕ್ ಸಮಿತಿ ಅಧ್ಯಕ್ಷ ರಂಜನ್ ಜಿ ಗೌಡ, ಜಿ.ಪಂ ಸದಸ್ಯರಾದ ಸಾಹುಲ್ ಹಮೀದ್, ಧರಣೇಂದ್ರ ಕುಮಾರ್, ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಪ್ರತಿಭಟನೆಯಲ್ಲಿ ಬೆಳ್ತಂಗಡಿ ಶ್ರೀ ನಾರಾಯಣ ಗುರು ಸ್ವಾಮಿ ಸಭಾ ಭವನದಲ್ಲಿ ಕಾರ್ಯಕರ್ತರು ಒಟ್ಟು ಸೇರಿ, ಮೆರವಣಿಗೆಯ ಮೂಲಕ ಮಿನಿ ವಿಧಾನಸೌಧಕ್ಕೆ ತೆರಳಿ ಹತ್ರಾಸ್ ಘಟನೆ ಬಗ್ಗೆ ತಾಲೂಕು ತಹಶೀಲ್ದಾರರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ನೀಡಿ ನಂತರ ಬೆಳ್ತಂಗಡಿ ತಾ.ಪಂ ವಠಾರದಲ್ಲಿ ಪ್ರತಿಭಟನೆ ನಡೆಯಿತು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.