HomePage_Banner_
HomePage_Banner_

ಧರ್ಮಸ್ಥಳ ಡಾ. ಹೆಗ್ಗಡೆಯವರಿಂದ ರೋಟರಿ ಸೇವಾ ಟ್ರಸ್ಟ್‌ಗೆ ರೂ.3ಲಕ್ಷ ದೇಣಿಗೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಉಜಿರೆ ಗ್ರಾಮದಲ್ಲಿ ರೋಟರಿ ಕ್ಲಬ್‌ನ ಸುವರ್ಣ ಮಹೋತ್ಸವ ಕಟ್ಟಡ ನಿರ್ಮಾಣಕ್ಕೆ ರೂ 3 ಲಕ್ಷ ಧನ ಸಹಾಯವನ್ನು ನೀಡಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ಸಮುದಾಯ ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಶ್ರೀಹರಿ ಯವರು ಕಟ್ಟಡ ನಿರ್ಮಾಣವಾಗುವ ಸ್ಥಳಕ್ಕೆ ಭೇಟಿ ನೀಡಿ ಈ ದೇಣಿಗೆಯನ್ನು ಟ್ರಸ್ಟ್‌ಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ರೋಟರಿ ಸೇವಾ ಟ್ರಸ್ಟ್‌ನ ಅಧ್ಯಕ್ಷ ಎಂ.ವಿ ಭಟ್, ಸದಸ್ಯರಾದ ಡಾ.ಶಶಿಧರ ಡೋಂಗ್ರೆ, ಶ್ರೀಕಾಂತ್ ಕಾಮತ್, ಡಾ.ಗೋಪಾಲಕೃಷ್ಣ ಹಾಗೂ ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಬಿ.ಕೆ ಧನಂಜಯ ರಾವ್ ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.