HomePage_Banner_
HomePage_Banner_

ಪಟ್ಟಣ ಪಂಚಾಯತ್ ಮೀಸಲಾತಿಗೆ ಹೈಕೋರ್ಟ್ ಅಸ್ತು: ನ.10 ರೊಳಗೆ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಗೆ ಆದೇಶ

ಬೆಳ್ತಂಗಡಿ : ಪಟ್ಟಣ ಪಂಚಾಯತು ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿಗೆ ಹೈಕೋರ್ಟ್ ಮನ್ನಣೆ ನೀಡಿದ್ದು, ನ.10 ರೊಳಗಾಗಿ ಚುನಾವಣಾ ಪ್ರಕ್ರಿಯೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.
ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿಗೆ ರಾಜ್ಯ ಸರ್ಕಾರ ಅ.8 ರಂದು ಹೊರಡಿಸಿದ್ದ ಅಧಿಸೂಚನೆಗೆ ಅ.19 ರಂದು ಹೈಕೋರ್ಟ್ ನೀಡಿದ್ದ ಮಧ್ಯಂತರ ಆದೇಶವನ್ನು ಹಿಂಪಡೆದಿದೆ. ನಿಗದಿತ ಮೀಸಲಾತಿ ಪ್ರಕಾರ ಚುನಾವಣೆ ಮುಂದುವರಿಸಲು ಸರಕಾರಕ್ಕೆ ಸೂಚನೆ ನೀಡಿದೆ.
ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಆಕಾಂಕ್ಷಿಗಳು ಮೀಸಲಾತಿಯನ್ನು ಪ್ರಶ್ನಿಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಅ.22 ರಂದು ನ್ಯಾಯಮೂರ್ತಿ ಆರ್. ದೇವದಾಸ್ ಅವರಿದ್ದ ಏಕಸದಸ್ಯ ಪೀಠ ವಿಚಾರಣೆಯನ್ನು ನಡೆಸಿ, ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಪೀಠ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಮೀಸಲು ಅಧಿಸೂಚನೆಗೆ ನೀಡಲಾಗಿದ್ದ ಮಧ್ಯಂತರ ತಡೆ ನೀಡಿ ಚುನಾವಣೆ ನಡೆಸುವಂತೆ ವಿಭಾಗೀಯ ನ್ಯಾಯಪೀಠ ಆದೇಶಿಸಿದೆ.
ಅದೇ ಆಧಾರದಲ್ಲಿ ಪುರಸಭೆ ಮತ್ತು ನಗರ ಪಂಚಾಯತ್‌ಗಳ ಅಧ್ಯಕ್ಷರ ಚುನಾವಣೆಗಳು ನಡೆಯಬೇಕು ಎಂದು ಆದೇಶಿಸಿದೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.