HomePage_Banner_
HomePage_Banner_

ಸುಲ್ಕೇರಿಮೊಗ್ರು ಸಹಕಾರಿ ಸಂಘದ ಸಿಇಒ ಪಿ.ಹೆಚ್ ನಿತ್ಯಾನಂದ ಶೆಟ್ಟಿಯವರಿಗೆ ಅಭಿನಂದನೆ

 

ಶಿರ್ಲಾಲು : ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ ಶಿರ್ಲಾಲುವಿನಲ್ಲಿ ಕಳೆದ 37 ವರ್ಷಗಳಿಂದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾಗಿ ಸುದೀರ್ಘ ಸೇವೆ ಸಲ್ಲಿಸಿ ಜೊತೆಗೆ ಹಲವಾರು ಸಂಘಸಂಸ್ಥೆಗಳಲ್ಲಿ ಸಾಮಾಜಿಕ ಧಾರ್ಮಿಕವಾಗಿ, ಶೈಕ್ಷಣಿಕವಾಗಿ ಗುರುತಿಸಿಕೊಂಡು ಎಲ್ಲರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾದ ಪಿಹೆಚ್ ನಿತ್ಯಾನಂದ ಶೆಟ್ಟಿಯವರು ಅಕ್ಟೋಬರ್ 2020ಕ್ಕೆ ಸೇವೆಯಿಂದ ನಿವೃತ್ತರಾಗಲಿರುವುದರಿಂದ ಅವರಿಗೆ ಅಭಿನಂದನಾ ಸಮಾರಂಭವು ಅಳದಂಗಡಿ ಶ್ರೀ ಗುರು ಸಭಾಭವನದಲ್ಲಿ ನಡೆಯಿತು.

ಬೆಳ್ತಂಗಡಿ ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಕಿಶೋರ್ ಹೆಗ್ಡೆ, ಅಭಿನಂದನಾ ಭಾಷಣ ಮಾಡಿದರು.


ಈ ಸಂದರ್ಭದಲ್ಲಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರು, ದಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ ಎನ್ ರಾಜೇಂದ್ರ ಕುಮಾರ್ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯರಾದ ಕೆ.ಹರೀಶ್ ಕುಮಾರ್, ಪ್ರತಾಪ್ ಸಿಂಹ ನಾಯಕ್, ಮಂಗಳೂರು ಸಹಕಾರಿ ಸಂಘಗಳ ಉಪನಿಬಂಧಕ ಪ್ರವೀಣ ಬಿ. ನಾಯಕ್, ಪುತ್ತೂರು ಸಹಕಾರ ಸಂಘಗಳ ಸಹಾಯಕ ನಿಬಂಧಕ ರಾಜು, ಬೆಳ್ತಂಗಡಿ ಪಿ.ಎಲ್‌ಡಿ ಬ್ಯಾಂಕ್ ಅಧ್ಯಕ್ಷ ಸೋಮನಾಥ ಬಂಗೇರ, ಪ್ರಗತಿಪರ ಕೃಷಿಕ ಎಂ. ಗಂಗಾಧರ ಮಿತ್ತಮಾರು, ಅಳದಂಗಡಿ ತಾ. ಪಂ. ಸದಸ್ಯೆ ವಿನುಷಾ ಪ್ರಕಾಶ್, ಅಡಿಂಜೆ ತಾ.ಪಂ. ಸದಸ್ಯ ಸುಧೀರ್ ಆರ್ ಸುವರ್ಣ, ಬೆಳ್ತಂಗಡಿ ಸಹಕಾರ ಅಭಿವೃದ್ಧಿ ಅಧಿಕಾರಿ ಸುಕನ್ಯ ಭಟ್, ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ ಶಿರ್ಲಾಲು ಅಧ್ಯಕ್ಷ ನವೀನ್ ಕೆ. ಸಾಮಾನಿ, ಉಪಾಧ್ಯಕ್ಷ ತಾರಾನಾಥ ಗೌಡ,ನಿರ್ದೇಶಕರುಗಳಾದ ನಾರಾಯಣ ರಾವ್, ಸುಮಿತ್ರ ಬಿ ಹೆಗ್ಡೆ, ಶಿವಪ್ಪ ಪೂಜಾರಿ, ರಾಮ ಬಂಗೇರಾ, ಆನಂದ ಸಾಲ್ಯಾನ್, ಶೀನಪ್ಪ ಎಂ, ಮಲ್ಲಿಕಾ, ಸುಶೀಲಾ, ಯಶೋಧರ ಎನ್, ಸುಧೀರ್ ಹಾಗೂ ಬ್ಯಾಂಕ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.