HomePage_Banner_
HomePage_Banner_

ಧರ್ಮಸ್ಥಳ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿಯ ಬಂಧನ

ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

ಧರ್ಮಸ್ಥಳ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ 14 ವರ್ಷದ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ ನಾವೂರಿನ ಓರ್ವ ಆರೋಪಿಯನ್ನು ಧರ್ಮಸ್ಥಳ ಪೋಲೀಸರು ಬಂಧಿಸಿದ ಘಟನೆ ವರದಿಯಾಗಿದೆ
ಧರ್ಮಸ್ಥಳದ ಅಪ್ರಾಪ್ತ ಬಾಲಕಿಗೆ ಆರೋಪಿ ನಾವೂರು ನಿವಾಸಿ ಜನಾರ್ಧನ ಪೂಜಾರಿ(42.ವ)ಯವರು ಅ.೨೨ರಂದು ಕುವೆಟ್ಟು ಗ್ರಾಮದ ಮದ್ದಡ್ಕ ಬಳಿ ವಾಸ್ತವ್ಯವಿರುವ ತನ್ನ ಸ್ನೇಹಿತನ ರೂಮಿನಲ್ಲಿ ಲೈಂಗಿಕ ದೌರ್ಜನ್ಯವೆಸಗಿದ್ದು, ಬಾಲಕಿ ಹೆದರಿ ಈ ಬಗ್ಗೆ ಯಾರಿಗೂ ವಿಚಾರ ತಿಳಿಸಿರಲಿಲ್ಲ. ನಂತರ ಅ.26 ರಂದು ಬಾಲಕಿ ವಿಚಾರವನ್ನು ಮನೆಯವರಿಗೆ ತಿಳಿಸಿದ್ದು, ಮನೆಯವರು ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಈ ಬಗ್ಗೆ ಕಾರ್ಯಪ್ರವೃತ್ತರಾದ ಧರ್ಮಸ್ಥಳ ಪೊಲೀಸರು ಆರೋಪಿಯನ್ನು ಬಂಧಿಸಿ, ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.