HomePage_Banner_
HomePage_Banner_

ಬೆಳ್ತಂಗಡಿ ಬಿಜೆಪಿ ಮಂಡಲ ವತಿಯಿಂದ ವಾಲ್ಮೀಕಿ ಜಯಂತಿ ಆಚರಣೆ

 ಬಿಜೆಪಿ ಪಕ್ಷ ಹಿಂದುಳಿದ ವರ್ಗಗಳ ಮಹನೀಯರ ಆದರ್ಶಗಳನ್ನು ಮುಂದಿಟ್ಡುಕೊಂಡು ಆ ವರ್ಗಗಳಿಗೆ ಶಕ್ತಿ ನೀಡುವ ಕೆಲಸ ಮಾಡುತ್ತಿದೆ: ಜಯಂತ್ ಕೋಟ್ಯಾನ್

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಎಸ್.ಟಿ. ಮೋರ್ಚಾ ಆಶ್ರಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಡೆಯಿತು.
ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿ, ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮಹನೀಯರ ಆದರ್ಶಗಳನ್ನು ಮುಂದಿಟ್ಡುಕೊಂಡು ಆ ವರ್ಗಗಳಿಗೆ ಶಕ್ತಿ ನೀಡುವ ಕೆಲಸ ಮಾಡುತ್ತಿದೆ. ಮಹರ್ಷಿ ವಾಲ್ಮೀಕಿ ನಮಗೆ ಆ ದೃಷ್ಠಿಯಿಂದ ಆದರ್ಶಪ್ರಾಯರು ಎಂದರು.
ಬಿಜೆಪಿ ಮಂಡಲ ಉಪಾಧ್ಯಕ್ಷ ಸೀತಾರಾಮ ಬಿ.ಎಸ್. ವಾಲ್ಮೀಕಿ ಮಹರ್ಷಿಯ ಜೀವನ ಚರಿತ್ರೆ ಬಗ್ಗೆ ಮಾತನಾಡಿದರು. ಮಂಡಲ ಎಸ್. ಟಿ. ಮೋರ್ಚಾ ಅಧ್ಯಕ್ಷ ಹರೀಶ್ ಎಳನೀರು ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕೊರಗಪ್ಪ ನಾಯ್ಕ, ಲ್ಯಾಂಪ್ಸ್ ಸೊಸೈಟಿ ಅಧ್ಯಕ್ಷ ಲಿಂಗಪ್ಪ ನಾಯ್ಕ  ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.