ಮರೋಡಿ: ನೊಂದಣಿಯಾದ ಕಟ್ಟಡ ಕಾರ್ಮಿಕರ ಗುರುತಿನ ಚೀಟಿ ವಿತರಣೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಮರೋಡಿ: ಭಾರತೀಯ ಮಜ್ದೂರ್ ಸಂಘ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಹಾಗೂ ಇದರ ಅಶ್ರಯದಲ್ಲಿ ನೊಂದಣಿಯಾದ ಕಟ್ಟಡ ಕಾರ್ಮಿಕರ ಗುರುತಿನ ಚೀಟಿ ವಿತರಣೆ ಹಾಗೂ ಕಾರ್ಮಿಕರ ಸೌಲಭ್ಯಗಳ ಮಾಹಿತಿ ಕಾರ್ಯಾಗಾರ ನ.1 ರಂದು ಮರೋಡಿ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆಯಿತು.
ಬಿಎಂಎಸ್ ಗ್ರಾಮ ಸಮಿತಿ ಅಧ್ಯಕ್ಷ ಗಣೇಶ್ ಕರ್ಕೇರ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಬಿ.ಎಂ.ಎಸ್ ತಾಲೂಕು ಸಮಿತಿ ಅಧ್ಯಕ್ಷ ಉದಯ ಬಿ.ಕೆ ಮಾತನಾಡಿ, ಭಾರತೀಯ ಮಜ್ದೂರ್ ಸಂಘ ಕಾರ್ಮಿಕರ ಸೌಲಭ್ಯಗಳನ್ನು ಸುಲಭವಾಗಿ ತೆಗೆಸಿಕೊಡಲು ನೆರವಾಗುತ್ತಿದೆ. ಹಾಗೂ ರಾಷ್ಟ್ರದ ಉನ್ನತಿಯ ಕಾರ್ಯದಲ್ಲಿ ಕಾರ್ಮಿರನ್ನು ಜೋಡಿಸುತ್ತಿದೆ. ಬಿ.ಎಂ.ಎಸ್‌ನ ಸ್ಥಾಪಕರಾದ ದತ್ತೋ ಪಂತ ಥೇಂಗಡಿಜೀ ಅವರ ಕನಸನ್ನು ಸಾಕಾರ ಮಾಡಲು ಕಾರ್ಮಿಕರ ಸಹಕಾರ ಅಗತ್ಯ ಎಂದು ಹೇಳಿದರು
ಬಿ.ಎಂ.ಎಸ್ ನ ತಾಲೂಕು ಸಮಿತಿ ಕಾರ್ಯದರ್ಶಿ ಜಯರಾಜ್ ಸಾಲಿಯಾನ್ ಕಾರ್ಮಿಕರಿಗಿರುವ ಸೌಲಭ್ಯಗಳು ಹಾಗೂ ಜೀವನ ಬೀಮಾ ಹಾಗೂ ಸುರಕ್ಷಾ ಇನ್ಸೂರೆನ್ಸ್ ಯೋಜನೆಗಳು ಹಾಗೂ ಪ್ರಧಾನ ಮಂತ್ರಿ ಶ್ರಮ ಯೋಗಿಕ್ ಪಿಂಚಣಿ ಯೋಜನೆಗಳ ಮಾಹಿತಿ ನೀಡಿದರು. ನಂತರ ಸುಮಾರು ೨೫ ಕಾರ್ಮಿಕರಿಗೆ ಕಾರ್ಮಿಕ ಕಾರ್ಡ್ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಬಿಎಂಎಸ್ ಪ್ರಾಯೋಜಿತ ಉಡುಪಿ ಮಂಗಳೂರು ಜಿಲ್ಲೆಯ ಕೆಎಸ್‌ಆರ್‌ಟಿಸಿ ಬಸ್ ಚಾಲಕರ ಸಂಘ ಸ್ಥಾಪಕಾಧ್ಯಕ್ಷ ಡಿ ಬಾಲಕೃಷ್ಣ ಮತ್ತು ಗ್ರಾಮ ಸಮಿತಿ ಮಾಜಿ ಅಧ್ಯಕ್ಷ ಗೋಪಾಲ್ ಶೆಟ್ಟಿ ಉಪಸ್ಥಿತರಿದ್ದರು.
ಯಶೋಧರ ಆಚಾರ್ಯ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಪ್ರಮೋದ್ ಕುಲಾಲ್ ಧನ್ಯವಾದವಿತ್ತರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.