HomePage_Banner_
HomePage_Banner_

ಆತ್ಮಹತ್ಯೆ ಯತ್ನ: ತಂದೆ ಮತ್ತು ಮಗು ಸಾವು; ತಾಯಿ ಸ್ಥಿತಿ ಗಂಭೀರ

ಚೇತನ್ ಕುಮಾರ್ ರವರ ಮನೆ

ಕೊಕ್ರಾಡಿ: ಇಲ್ಲಿಯ ಅತ್ರಿಜಾಲು ಸಮೀಪದ ಹೆಡ್ಲಬೆಟ್ಟು ಮನೆಯಲ್ಲಿ ವಾಸ್ತವ್ಯವಿದ್ದ ಕೃಷಿಕ ದಂಪತಿ ತಮ್ಮ ಮಗುವಿನೊಂದಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನ.2 ರಂದು ತಡರಾತ್ರಿ ನಡೆದಿದೆ.
ಆತ್ಮಹತ್ಯೆಗೆ ಯತ್ನಿಸಿದ್ದ ಮೂವರಲ್ಲಿ ತಂದೆ ಮತ್ತು ಮಗು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ ಆಶಾ ಅವರ ಸ್ಥಿತಿಯು ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಘಟನೆಯ ವಿವರ: ಕೊಕ್ರಾಡಿ ಗ್ರಾಮದ ಅತ್ರಿಜಾಲು ನಿವಾಸಿ ಚೇತನ್ ಕುಮಾರ್ (37.ವ) ಅವರ ಪತ್ನಿ ಆಶಾ(30.ವ) ಹಾಗೂ 5 ವರ್ಷ ಪ್ರಾಯದ ಮಗು  ಕಿಶಾ ಆತ್ಮಹತ್ಯೆಗೆ ಯತ್ನಿಸಿದ್ದರು. ಚಿಂತಾಜನಕ ಸ್ಥಿತಿಯಲ್ಲಿದ್ದ ಈ ಮೂವರನ್ನೂ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇವರು ಪ್ರಗತಿಪರ ಕೃಷಿಕರಾಗಿದ್ದು, ಆರ್ಥಿಕವಾಗಿ ಸಧೃಢರಾಗಿದ್ದರು. ಯಾವುದೋ ಕೌಟುಂಬಿಕ ಕಲಹ ಈ ಘಟನೆಗೆ ಕಾರಣವಾಗಿರುವ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೊಕ್ರಾಡಿ: ಮಗುವಿನೊಂದಿಗೆ ದಂಪತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.