HomePage_Banner_
HomePage_Banner_

ಕೃಷಿ ಇಲಾಖೆಯಿಂದ ಕೃಷಿ ಉಪಕರಣ ವಿತರಣೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ದ.ಕ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಬೆಳ್ತಂಗಡಿ ತಾಲೂಕು ವತಿಯಿಂದ ೨೦೨೨೦-೨೧ನೇ ಸಾಲಿನ ಕೃಷಿ ಯಂತ್ರೀಕರಣ ಉಪ ಅಭಿಯಾನ ಯೋಜನೆಯಡಿ ಸಹಾಯಧನದಲ್ಲಿ ರೈತರಿಗೆ ಸಣ್ಣ ಟ್ರ್ಯಾಕ್ಟರ್ ಮತ್ತು ಟ್ರಾನ್ಸ್‌ಪ್ಲೆಂಟರ್ ಹಾಗೂ ಇತರ ಕೃಷಿ ಉಪಕರಣಗಳ ವಿತರಣೆ ನ. ೪ ರಂದು ಬೆಳ್ತಂಗಡಿ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಲ್ಲಿ ನಡೆಯಿತು.


ಶಾಸಕ ಹರೀಶ್ ಪೂಂಜಾ ಸಣ್ಣ ಟ್ರ್ಯಾಕ್ಟರ್ ಮತ್ತು ಟ್ರಾನ್ಸ್‌ಪ್ಲೆಂಟರ್ ಮತ್ತು ಕೃಷಿ ಉಪಕರಣಗಳನ್ನು ವಿತರಣೆ ಮಾಡಿ ಮಾತನಾಡಿದರು. 
ವಿಧಾನ ಪರಿಷತ್ ಶಾಸಕ ಪ್ರತಾಪ್‌ಸಿಂಹ ನಾಯಕ್ ಈ ಸಂದರ್ಭದಲ್ಲಿ ಮಾತನಾಡಿದರು. 
ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಂಜಿತ್ ಕುಮಾರ್, ಜಿಲ್ಲಾ ಪಂಚಾಯತ್ ಸದಸ್ಯರುಗಳಾದ ಕೊರಗಪ್ಪ ನಾಯ್ಕ, ಸೌಮ್ಯಲತಾ ಜಯಂತ್ ಗೌಡ, ಮಮತಾ ಶೆಟ್ಟಿ, ತಾಲೂಕು ಪಂಚಾಯತ್ ಅಧ್ಯಕ್ಷೆ ದಿವ್ಯಜ್ಯೋತಿ, ಉಪಾಧ್ಯಕ್ಷೆ ವೇದಾವತಿ, ಸ್ಥಾಯಿಸಮಿತಿ ಅಧ್ಯಕ್ಷ ಶಶಿಧರ ಎಂ ಕಲ್ಮಂಜ, ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ, ಇಲಾಖಾಧಿಕಾರಿಗಳು, ಫಲಾನುಭವಿಗಳು ಉಪಸ್ಥಿತರಿದ್ದರು. ಸಹಾಯಕ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ಸ್ವಾಗತಿಸಿ ವಂದಿಸಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.