HomePage_Banner_
HomePage_Banner_

ಬೆಳ್ತಂಗಡಿ: ನೂತನ ಪಿಂಚಣಿ ಯೋಜನೆ (NPS) ರದ್ದು ಕೋರಿ ಶಾಸಕರಿಗೆ ಮನವಿ

ರಾಜ್ಯ ಸರ್ಕಾರಿ ನೌಕರರಲ್ಲಿ ೨೦೦೬ ನಂತರದಲ್ಲಿ ನೇಮಕ ಗೊಂಡವರಿಗೆ ಅಳವಡಿಸಿರುವ ಅವೈಜ್ಞಾನಿಕ ನೂತನ ಪಿಂಚಣಿ ಯೋಜನೆ (NPS) ರದ್ದು ಗೊಳಿಸಲು, ರಾಜ್ಯದ ಮುಖ್ಯಮಂತ್ರಿಗಳಿಗೆ ಒತ್ತಾಯಿಸಲು ಕೋರಿ ಶಾಸಕ ಹರೀಶ್ ಪೂಂಜರಿಗೆ, ವಿಧಾನ ಪರಿಷತ್ ಸದಸ್ಯರುಗಳಾದ ಕೆ.ಹರೀಶ್ ಕುಮಾರ್ ಹಾಗೂ ಪ್ರತಾಪ್‌ಸಿಂಹ ನಾಯಕ್ ಇವರಿಗೆ ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘದ ಬೆಳ್ತಂಗಡಿ ತಾಲೂಕು ಘಟಕದ ಪರವಾಗಿ ಮನವಿ ಸಲ್ಲಿಸಲಾಯಿತು. ಮನವಿ ಸ್ವೀಕರಿಸಿದ ಸಂದರ್ಭದಲ್ಲಿ ಮಾತನಾಡಿದ ಮಾನ್ಯ ಶಾಸಕರು ,ಈ ಯೋಜನೆ ಸಂಪೂರ್ಣ ಅವೈಜ್ಞಾನಿಕ ವಾಗಿದ್ದು,ಈಗಾಗಲೇ ಈ ಬಗ್ಗೆ ಶಾಸನ ಸಭೆಯಲ್ಲಿ ಧ್ವನಿ ಎತ್ತಿದ್ದೇನೆ..ಮುಂದೆಯೂ ಮಾನ್ಯ ಮುಖ್ಯಮಂತ್ರಿ ಗಳಿಗೆ ಯೋಜನೆ ರದ್ದತಿ ಗೆ ಒತ್ತಾಯಿಸುತ್ತೇನೆಂದು ತಿಳಿಸಿದರು.


ಈ ಸಂದರ್ಭದಲ್ಲಿ ಸಂಘದ ತಾಲೂಕು ಘಟಕದ ಅಧ್ಯಕ್ಷರಾದ ಸುರೇಶ್ ಮಾಚಾರ್,ಪ್ರಧಾನ ಕಾರ್ಯದರ್ಶಿ ಸೀತಾರಾಮ, ಸಂಘಟನಾ ಕಾರ್ಯದರ್ಶಿ ಪರಮೇಶ್, ಪದಾಧಿಕಾರಿಗಳಾದ ವಿಶ್ವ, ರಾಜೇಶ್ ನೆಲ್ಯಾಡಿ, ಗುಣವತಿ, ಮೋಹಿನಿ, ಚೌಡಯ್ಯ ಉಪಸ್ಥಿತರಿದ್ದರು. ಶಾಸಕರ ಆಪ್ತ ಸಹಾಯಕ ರಾದ ಪುಟ್ಟಸ್ವಾಮಿ ಸಹಕರಿಸಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.