HomePage_Banner_
HomePage_Banner_

ಬೆಳ್ತಂಗಡಿಯಲ್ಲಿ ‘ಕಾಳಜಿ – ಫ್ಲಡ್ ರಿಲೀಫ್ ಫಂಡ್’ ಸಹಾಯಧನ ವಿತರಣಾ ಕಾರ್ಯಕ್ರಮಕ್ಕೆ ಸಚಿವ ಸಿ.ಟಿ. ರವಿ ಚಾಲನೆ


ಬೆಳ್ತಂಗಡಿ:
2019ರಲ್ಲಿ ಈ ಭಾಗದಲ್ಲಿ ಸಂಭವಿಸಿದ್ದ ಭೀಕರ ನೆರೆಯಿಂದಾಗಿ ತಮ್ಮ ಮನೆಗಳನ್ನು ಕಳೆದುಕೊಂಡವರಿಗೆ ಕಾಳಜಿ – ಬೆಳ್ತಂಗಡಿ ಫ್ಲಡ್ ರಿಲೀಫ್ ಫಂಡ್ ವತಿಯಿಂದ ಸಹಾಯಧನವನ್ನು ಇಂದು ವಿತರಿಸಲಾಯಿತು.

ಸಚಿವ ಸಿ.ಟಿ. ರವಿ, ವಿಧಾನ ಪರಿಷತ್ತಿನ ಸದಸ್ಯ ಪ್ರತಾಪ್ ಸಿಂಹ ನಾಯಕ್, ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಮತ್ತು ವೇದಿಕೆಯಲ್ಲಿ ಉಪಸ್ಥಿತರಿದ್ದ ಕಾಳಜಿ ಸದಸ್ಯರು ದೀಪ ಬೆಳಗುವ ಮೂಲಕ ಹಾಗೂ ಭಾರತಾಂಬೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು.

ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾಗಿರುವ ಸಿ.ಟಿ. ರವಿ ಅವರು ಸಾಂಕೇತಿಕವಾಗಿ 6 ಫಲಾನುಭವಿಗಳಿಗೆ ಪರಿಹಾರ ಧನದ ಚೆಕ್ ಅನ್ನು ವಿತರಿಸುವ ಮೂಲಕ ಈ ಸಹಾಯಧನ ವಿತರಣಾ ಕಾರ್ಯಕ್ಕೆ ಚಾಲನೆಯನ್ನು ನೀಡಿದರು.


ಬಳಿಕ ಇದೀಗ ಸಚಿವ ಸಿ ಟಿ ರವಿ ಅವರು ಬೆಳ್ತಂಗಡಿಗೆ ತೆರಳಿದ್ದು, ಇಲ್ಲಿನ ಶ್ರೀ ಧ.ಮಂ. ಕಲಾಭವನದಲ್ಲಿ ನಡೆಯುತ್ತಿರುವ ‘ಕಾಳಜಿ – ಬೆಳ್ತಂಗಡಿ ಫ್ಲಡ್ ರಿಲೀಫ್ ಫಂಡ್’ ವತಿಯಿಂದ 299 ನೆರೆ ಸಂತ್ರಸ್ತ ಕುಟುಂಬಗಳಿಗೆ ಒಟ್ಟು 2.73 ಕೋಟಿ ರಪಾಯಿಗಳ ಸಹಾಯಧನದ ಚೆಕ್ ಹಸ್ತಾಂತರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.

ಸಿ.ಟಿ. ರವಿ ಧರ್ಮಸ್ಥಳ ಭೇಟಿ
ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಸಚಿವ ಸಿ.ಟಿ.ರವಿ ಅವರು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು.

ಮಂಜುನಾಥ ಸ್ವಾಮಿಯ ದರ್ಶನವನ್ನು ಪಡೆದ ಬಳಿಕ ಸಚಿವ ರವಿ ಅವರು ಕ್ಷೇತ್ರದ ಧರ್ಮಾಧಿಕಾರಿಗಳಾಗಿರುವ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಸಚಿವರ ಜೊತೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯರಾಗಿರುವ ಪ್ರತಾಪ್ ಸಿಂಹ ನಾಯಕ್ ಸೇರಿದಂತೆ ಸ್ಥಳೀಯ ಬಿಜೆಪಿ ನಾಯಕರು ಇದ್ದರು.

ಸುದ್ದಿ ನ್ಯೂಸ್ ಬೆಳ್ತಂಗಡಿಯ ಯೂಟ್ಯೂಬ್ ಹಾಗೂ ಫೇಸ್ಬುಕ್ ಗಳಲ್ಲಿ ಇದೀಗ ಈ ಕಾರ್ಯಕ್ರಮದ ನೇರಪ್ರಸಾರ ನಡೆಯುತ್ತಿದೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.