HomePage_Banner_
HomePage_Banner_

ಬೆಳ್ತಂಗಡಿ: ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಬೀಳ್ಕೊಡುಗೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಇತ್ತೀಚೆಗೆ ನಿವೃತ್ತರಾದ ಶಿರ್ಲಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಿಇಒ ಪಿ.ಹೆಚ್ ನಿತ್ಯಾನಂದ ಶೆಟ್ಟಿ ಮತ್ತು ಬಂಗಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಿಇಒ ಕೆ. ಪುಷ್ಪಲತಾ ರವರಿಗೆ ಬೆಳ್ತಂಗಡಿ ತಾಲೂಕು ಸಹಕಾರ ಸಂಘಗಳ ಕಾರ್ಯನಿರ್ವಾಹಕರ ವತಿಯಿಂದ ಬೀಳ್ಕೊಡುಗೆ ಸಮಾರಂಭವು ನ.5 ರಂದು ಬೆಳ್ತಂಗಡಿ ಜಿಲ್ಲಾ ಕೇಂದ್ರ ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಿತು.


ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ನಿರಂಜನ ಬಾವಂತಬೆಟ್ಟು, ಪುತ್ತೂರು ಸಹಾಕಾರಿ ಸಂಘಗಳ ಸಹಾಯಕ ನಿಬಂಧಕ ರಾಜು, ಬೆಳ್ತಂಗಡಿ ಸಹಕಾರಿ ಸಂಘಗಳ ಅಭಿವೃದ್ಧಿ ಅಧಿಕಾರಿ ಸುಕನ್ಯಾ, ಬೆಳ್ತಂಗಡಿ ಸಹಕಾರಿ ಯೂನಿಯನ್ ಅಧ್ಯಕ್ಷ ಕೆ ಸತೀಶ್ ಕಾಶಿಪಟ್ಣ, ಜಿಲ್ಲಾ ಯೂನಿಯನ್ ಕಾರ್ಯದರ್ಶಿ ನಾಗಪ್ರಸಾದ್, ಡಿಸಿಸಿ ಬ್ಯಾಂಕಿನ ಸಿಬ್ಬಂದಿ ಸುನೀಲ್ ಕುಮಾರ್ ಹೊಳ್ಳ, ಬೆಳ್ತಂಗಡಿ ತಾಲೂಕಿನ ಎಲ್ಲಾ ಸಹಕಾರಿ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಉಪಸ್ಥಿತರಿದ್ದರು.


ಪೆರಾಡಿ ಸಹಕಾರಿ ಸಂಘದ ಸಿ.ಇ.ಒ ಲತೀಫ್ ಸ್ವಾಗತಿಸಿದರು. ಗುರುವಾಯನಕೆರೆ ಸಹಕಾರಿ ಸಂಘದ ಸಿಇಒ ಅನಂತರಾಜ ಜೈನ್ ಮತ್ತು ಪಡಂಗಡಿ ಸಹಕಾರಿ ಸಂಘದ ಸಿಇಒ ಸುಕೇಶಿನಿ ಸನ್ಮಾನಿತರನ್ನು ಪರಿಚಯಿಸಿದರು. ಮುಂಡಾಜೆ ಸಹಕಾರಿ ಸಂಘದ ಸಿಇಒ ನಾರಾಯಣ ಫಡ್ಕೆ ಕಾರ್ಯಕ್ರಮ ನಿರೂಪಿಸಿ, ಬೆಳ್ತಂಗಡಿ ಸಹಕಾರಿ ಸಂಘದ ಸಿಇಒ ಪ್ರಸಾದ್ ವಂದಿಸಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.