HomePage_Banner_
HomePage_Banner_

ಎಂಎನ್‌ಆರ್‌ಇಜಿಎ ಯೋಜನೆಯಡಿ ಉತ್ತಮ ಸಾಧನೆ: ಬೆಳ್ತಂಗಡಿ ತಾಲೂಕಿನ 3 ಅಧಿಕಾರಿಗಳಿಗೆ ಪ್ರಶಸ್ತಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವತಿಯಿಂದ ದ.ಕ ಜಿಲ್ಲೆ ಮತ್ತು ತಾಲೂಕಿಗಳಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು 2019-20 ಹಾಗೂ ಪ್ರಸಕ್ತ ಸಾಲಿನಲ್ಲಿ ಅತ್ಯುತ್ತಮವಾಗಿ ಅನುಷ್ಠಾನ ಮಾಡಿದ ಅಧಿಕಾರಿ/ ಸಿಬ್ಬಂದಿ / ಮೇಟ್ಸ್ ಗಳನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಬೆಳ್ತಂಗಡಿ ತಾಲೂಕಿನ ಮೂವರು ಅಧಿಕಾರಿಗಳು ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಎಂಎನ್‌ಆರ್‌ಇಜಿಎ ಯೋಜನೆಯಡಿ ಉತ್ತಮ ಸಾಧನೆ ಮಾಡಿದ ಬೆಳ್ತಂಗಡಿ ತಾಲೂಕಿನ ಕೃಷಿ ಇಲಾಖೆಯ ಸಹಾಯಕ ಕಾರ್ಯದರ್ಶಿ ರಂಜಿತ್ ಕುಮಾರ್ , ಅಂಡಿಂಜೆ ಗ್ರಾಮ ಪಂಚಾಯತದ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಹಾಗೂ ಬೆಳ್ತಂಗಡಿ ತಾ.ಪಂ. ತಾಂತ್ರಿಕ ಸಂಯೋಜಕ ರುತೇಶ್ ಎಂ.ಜೆ ಇವರುಗಳು ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ನ.12 ರಂದು ಮೂಡಬಿದ್ರೆ ತಾಲೂಕಿನ ಪುತ್ತಿಗೆ ಗ್ರಾ.ಪಂ ಆವರಣದಲ್ಲಿ ನಡೆಯಲಿರುವ ನೂತನ ಘನತ್ಯಾಜ್ಯ ಘಟಕ ಉದ್ಘಾಟನೆ ಹಾಗೂ ಸ್ವಚ್ಛ ಸಂಕೀರ್ಣ ಏಕರೂಪದ ಬ್ರಾಂಡಿಂಗ್ ಲೋಕಾರ್ಪಣೆ ಹಗೂ ಜಿಲ್ಲಾ ಮಟ್ಟದ ಕಾರ್ಯಕ್ರಮದ ಸಮರೋಪ ಸಮಾರಂಭದಲ್ಲಿ ಇವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ದ.ಕ.ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ತಿಳಿಸಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.