HomePage_Banner_
HomePage_Banner_

ನ.ಪಂ. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ನಾಮಪತ್ರ ಸಲ್ಲಿಕೆ

ಬೆಳ್ತಂಗಡಿ: ಬೆಳ್ತಂಗಡಿ ನಗರ ಪಂಚಾಯತ್  ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಚುನಾವಣೆಗೆ ಭಾರತೀಯ ಜನತಾ ಪಕ್ಷದಿಂದ ಇಬ್ಬರು ನಾಮಪತ್ರ ಸಲ್ಲಿಸಿದರು.  ಅಧ್ಯಕ್ಷ ಸ್ಥಾನಕ್ಕ ಶ್ರೀಮತಿ ರಜನಿ ಕುಡ್ವ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಜಯಾನಂದ ಟಿ ಗೌಡ ರವರು ಚುನಾವಣಾಧಿಕಾರಿ ತಹಶೀಲ್ದಾರ್ ಮಹೇಶ್ ಜೆ. ಯವರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್,   ನ.ಪಂ ಸದಸ್ಯರು ಉಪಸ್ಥಿತರಿದ್ದರು

ಬಿಜೆಪಿ ಕೋರ್ ಕಮಿಟಿ ಸಭೆ: ಪಟ್ಟಣ ಪಂಚಾಯತದ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಲ್ಲಿ ರಜನಿ ಕುಡ್ವ ಹಾಗೂ ತುಳಸಿ ಕರುಣಾಕರ್ ಅವರ ನಡುವೆ ಸ್ಪರ್ಧೆ ಏರ್ಪಟ್ಟಿದ್ದರಿಂದ ನಾಮಪತ್ರ ಸಲ್ಲಿಸುವ ಮೊದಲು ಬಿಜೆಪಿ ವರಿಷ್ಠರು ಬಿಜೆಪಿಯಲ್ಲಿ ಚುನಾಯಿತರಾದ ಎಲ್ಲಾ ಸದಸ್ಯರ ಉಪಸ್ಥಿತಿಯಲ್ಲಿ ಕೋರ್ ಕಮಿಟಿ ಸಭೆ ನಡೆಸಿ, ಚರ್ಚಿಸಿ ಬಿಜೆಪಿಯ ಹಿರಿಯ ಸದಸ್ಯೆ ರಜನಿ ಕುಡ್ವ ಅವರನ್ನು ಅಧ್ಯಕ್ಷತೆಗೆ ಹಾಗೂ ಜಯಾನಂದ ಗೌಡ ಅವರನ್ನು ಉಪಾಧ್ಯಕ್ಷತೆಯ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ ನಂತರ ಅಭ್ಯರ್ಥಿಗಳು ತಮ್ಮ ನಾಮಪತ್ರ ಸಲ್ಲಿಸಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.