HomePage_Banner_
HomePage_Banner_

ಬೆಳ್ತಂಗಡಿ ಪ.ಪಂ  ಅಧ್ಯಕ್ಷರಾಗಿ ರಜನಿ ಕುಡ್ವ-ಉಪಾಧ್ಯಕ್ಷರಾಗಿ ಜಯಾನಂದ ಗೌಡ  ಅವಿರೋಧ ಆಯ್ಕೆ ಬಹುತೇಕ ಖಚಿತ

ಬೆಳ್ತಂಗಡಿ: ಬೆಳ್ತಂಗಡಿ ನಗರ ಪಂಚಾಯತದ ನೂತನ ಅಧ್ಯಕ್ಷರಾಗಿ ಬಿಜೆಪಿಯ ಹಿರಿಯ ಕಾರ್ಯಕರ್ತೆಯಾಗಿರುವ ಸದಸ್ಯೆ ರಜನಿ ಕುಡ್ವ ಹಾಗೂ ಉಪಾಧ್ಯಕ್ಷರಾಗಿ ಜಯಾನಂದ ಗೌಡ ಅವರು ಅವಿರೋಧವಾಗಿ ಆಯ್ಕೆ ಬಹುತೇಖ ಖಚಿತವಾಗಿದೆ.
ನ.7ರಂದು ಬೆಳ್ತಂಗಡಿ ಪಟ್ಟಣ ಪಂಚಾಯತದ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಚುನಾವಣೆಯು ಚುನಾವಣಾಧಿಕಾರಿ ತಹಶೀಲ್ದಾರ್ ಮಹೇಶ್ ಜೆ. ಅವರ ಉಪಸ್ಥಿತಿಯಲ್ಲಿ ನಡೆಯುತ್ತಿದೆ. ಪಂಚಾಯತದ ಅಧ್ಯಕ್ಷ ಗಾದಿ ಸಾಮಾನ್ಯ ಮಹಿಳೆಗೆ ಹಾಗೂ ಉಪಾಧ್ಯಕ್ಷ ಗಾದಿಯನ್ನು ಸಾಮಾನ್ಯ ಸ್ಥಾನಕ್ಕೆ ಮೀಸಲಿರಿಸಿ ಸರಕಾರ ಆದೇಶ ಹೊರಡಿಸಿತ್ತು. ಅಧ್ಯಕ್ಷತೆಗೆ ಬಿಜೆಪಿಯಿಂದ ರಜನಿ ಕುಡ್ವ ಹಾಗೂ ಉಪಾಧ್ಯಕ್ಷತೆಗೆ ಜಯಾನಂದ ಗೌಡ ನಾಮಪತ್ರ ಸಲ್ಲಿಸಿದ್ದರು.

ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಒಂದೊಂದೇ ನಾಮಪತ್ರ ಸಲ್ಲಿಕೆಯಾಗಿದ್ದರಿಂದ ರಜನಿ ಕುಡ್ವ ಅಧ್ಯಕ್ಷರಾಗಿ ಹಾಗೂ ಜಯಾನಂದ ಗೌಡ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವುದು ಬಹುತೇಖ ಖಚಿತವಾಗಿದೆ

ಪಟ್ಟಣ ಪಂಚಾಯತದಲ್ಲಿ 7 ಬಿಜೆಪಿ ಹಾಗೂ 4 ಕಾಂಗ್ರೆಸ್ ಸದಸ್ಯರಿದ್ದು, ಬಿಜೆಪಿಗೆ ಬಹುಮತ ಇರುವುದರಿಂದ ಕಾಂಗ್ರೆಸ್ ಸದಸ್ಯರು ಅಧ್ಯಕ್ಷ ಹಾಗೂ ಉಪಾಧ್ಯಕ್ಷತೆಗೆ ಇದುವರೆಗೆ ಯಾವುದೇ ನಾಮಪತ್ರ ಸಲ್ಲಿಸಲಿಲ್ಲ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.