HomePage_Banner_
HomePage_Banner_

 ಚಾರ್ಮಾಡಿ: ಕಾಂಗ್ರೆಸ್ ಕಾರ್ಯಕರ್ತರ ಹಾಗೂ ಪದಾಧಿಕಾರಿಗಳ ಐಕ್ಯತಾ ಸಮಾವೇಶ

ಚಾರ್ಮಾಡಿ:  ಭಾರತೀಯ ರಾಷಟ್ರೀಯ ಕಾಂಗ್ರೆಸ್ ಪಕ್ಷದ ಚಾರ್ಮಾಡಿ, ತೋಟತ್ತಾಡಿ, ಚಿಬಿದ್ರೆ ಗ್ರಾಮದ  ಕಾರ್ಯಕರ್ತರ ಹಾಗೂ ಪದಾಧಿಕಾರಿಗಳ ಐಕ್ಯತಾ ಸಮಾವೇಶ ನ.7 ರಂದು ಚಾರ್ಮಾಡಿಯ ಶ್ರೀ ಮಹಾಮ್ಮಾಯಿ ಮಾರಿಗುಡಿ ಸಭಾಭವನದಲ್ಲಿ ಜರುಗಿತು.

ಸಮಾವೇಶ ವನ್ನು  ವಿಧಾನ ಪರಿಷತ್ ಶಾಸಕ ಕೆ ಹರೀಶ್ ಕುಮಾರ್ ಉದ್ಘಾಟಿಸಿ ಕಾಂಗ್ರೆಸ್ ಪಕ್ಷದ ಸಾಧನೆಗಳು ,ದೇಶಕ್ಕೆ ಕಾಂಗ್ರೆಸ್ ಪಕ್ಷದ ಅನಿವಾರ್ಯತೆಯ ಬಗ್ಗೆ ತಿಳಿಸಿದರು . ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ವಿಭಾಗದ ಅಧ್ಯಕ್ಷ   ರಂಜನ್ ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ  ಶ್ರೀಮತಿ ನಮಿತ, ಯುವ ಕಾಂಗ್ರೆಸ್ ಅದ್ಯಕ್ಷ ಅಭಿನಂದನ್ ಹರೀಶ್ ಕುಮಾರ್,ತಾಲೂಕು ಪಂಚಾಯತ್ ಸದಸ್ಯರಾದ  ವಿ.ಟಿ ಸೆಬಾಸ್ಟಿನ್, ಚಿಬಿದ್ರೆ ಕಾಂಗ್ರೆಸ್ ಗ್ರಾಮ ಸಮಿತಿ ಅಧ್ಯಕ್ಷ  ಎ. ಮಮ್ಮಿ ಕುಂಞ,ಕಾಂಗ್ರೆಸ್ ಅಲ್ಪಸಂಖ್ಯಾತ ಗ್ರಾಮೀಣ ಘಟಕದ ಅಧ್ಯಕ್ಷ ರಾದ ಅಶ್ರಫ್ , ಎಪಿಎಂಸಿ ಮಾಜಿ ಉಪಾಧ್ಯಕ್ಷ  ಅಬ್ದುಲ್ ಗಫೂರ್,ಕಾಂಗ್ರೆಸ್ ಅಲ್ಪಸಂಖ್ಯಾತ ಗ್ರಾಮೀಣ ಘಟಕದ ಉಪಾಕ್ಷರಾದ  ಶಾಜಿ ತೋಫಿಲ್, ಮಡಂತ್ಯಾರು ಗ್ರಾ.ಪಂ ಮಾಜಿ ಸದಸ್ಯ ಅಬ್ದುಲ್ ರಹಿಮಾನ್ ಪಡ್ಪು,   ಮುಂಡಾಜೆ ಸಿ ಎ ಬ್ಯಾಂಕ್ ನಿರ್ದೇಶಕ ಎ ಶಶಿಧರ ಪೂಜಾರಿ, ಚಾರ್ಮಾಡಿ ಕಾಂಗ್ರೆಸ್ ಗ್ರಾಮ ಸಮಿತಿ ಅಧ್ಯಕ್ಷ  ಯಶೋಧರ ಪೂಜಾರಿ ವಲಸಾರಿ, ತೋಟತ್ತಾಡಿ ಕಾಂಗ್ರೆಸ್ ಗ್ರಾಮ ಸಮಿತಿ ಅಧ್ಯಕ್ಷ  ಪ್ರದೀಪ್ ಕೆ.ಸಿ,ಸಾಮಾಜಿಕ ಜಾಲತಾಣದ ಸಂಚಾಲಕರಾದ ಚಂದ್ರಶೇಖರ್ ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.