ಧರ್ಮಸ್ಥಳ: ಜ್ಞಾನತಾಣ ಕಾರ್ಯಕ್ರಮ ಉದ್ಘಾಟನೆ

ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಗ್ರಾಮೀಣ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮದಲ್ಲಿ ಅಂತರ್ಜಾಲ ಶಿಕ್ಷಣ ವ್ಯವಸ್ಥೆ

ಧರ್ಮಸ್ಥಳ: ಶೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕರ್ನಾಟಕ ರಾಜ್ಯದ ಗ್ರಾಮೀಣ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮದಲ್ಲಿ ಅಂತರ್ಜಾಲ ಶಿಕ್ಷಣ ವ್ಯವಸ್ಥೆ ‘ ಜ್ಞಾನತಾಣ‘ ಉದ್ಘಾಟನಾ ಕಾರ್ಯಕ್ರಮವು ನ.9 ರಂದು ಧರ್ಮಸ್ಥಳದ ಪ್ರವಚನ ಮಂಟಪದಲ್ಲಿ ಜರುಗಿತು.


ಕಾರ್ಯಕ್ರಮವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಡಿ. ಹರ್ಷೇಂದ್ರ ಕುಮಾರ್,  ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್, ಹಣಕಾಸು ವಿಭಾಗದ ಮುಖ್ಯಸ್ಥ ಶಾಂತಾರಾಮ ಪೈ ಉಪಸ್ಥಿತರಿದ್ದರು.

ಕಾಯ೯ಕ್ರಮ ದಲ್ಲಿ ಆರು ಮಂದಿ ವಿದ್ಯಾರ್ಥಿ ಗಳಿಗೆ ಸಾಂಕೇತಿಕ ವಾಗಿ ಲ್ಯಾಬ್ ಟ್ಯಾಬ್ ಮತ್ತು ಟ್ಯಾಬ್ ವಿತರಿಸಲಾಯಿತು.


ಮಮತಾರಾವ್ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು, ಯೋಜನಾಧಿಕಾರಿ ಜಯಕರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ , ಗುರುವಾಯನಕೆರೆ ವಿಭಾಗದ ಯೋಜನಾಧಿಕಾರಿ ಯಶವಂತ್ ಧನ್ಯವಾದವಿತ್ತರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.