HomePage_Banner_
HomePage_Banner_

ಪೆರಾಡಿ ಸಹಕಾರಿ ಸಂಘದ ಆಶ್ರಯದಲ್ಲಿ 67ನೇ ಅಖಿಲ ಭಾರತ ಸಹಕಾರ ಸಪ್ತಾಹ

ಹೊಸಂಗಡಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ಬೆಂಗಳೂರು, ದ.ಕ ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು, ಬೆಳ್ತಂಗಡಿ ತಾಲೂಕು ಸಹಕಾರಿ ಯೂನಿಯನ್, ದ.ಕ ಜಿಲ್ಲಾ ಸಹಕಾರ ಇಲಾಖೆ, ಬೆಳ್ತಂಗಡಿ ತಾಲೂಕಿನ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘಗಳು, ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ನೌಕರರ ಯೂನಿಯನ್ ಇವರ ಸಹಭಾಗಿತ್ವದಲ್ಲಿ, ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಶ್ರಯದಲ್ಲಿ 67ನೇ ಅಖಿಲ ಭಾರತ ಸಹಕಾರ ಸಪ್ತಾಹ-2020 ಉದ್ಘಾಟನಾ ಸಮಾರಂಭವು ಹೊಸಂಗಡಿ ಗ್ರಾಮದ ಪೆರಿಂಜೆ ಸಂತೃಪ್ತಿ ಸಭಾಭವನದಲ್ಲಿ ನ.17 ರಂದು ಜರುಗಿತು.


ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಲದ ಅಧ್ಯಕ್ಷ ಸಹಕಾರ ರತ್ನ ಡಾ| ಎಂ.ಎನ್ ರಾಜೇಂದ್ರ ಕುಮಾರ್ ಉದ್ಘಾಟಿಸಿದರು.
ದ.ಕ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ಶ್ರೀ ಕ್ಷೇತ್ರ ಪಡ್ಯಾರಬೆಟ್ಟು ಅನುವಂಶೀಯ ಆಡಳಿತದಾರ ಎ ಜೀವಂಧರ್ ಕುಮಾರ್, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಬಿ ನಿರಂಜನ್, ದ.ಕ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಪದ್ಮನಾಭ ಅರ್ಕಜೆ, ನಾರಾವಿ ಕ್ಷೇತ್ರದ ಜಿ.ಪಂ ಸದಸ್ಯ ಧರಣೇಂದ್ರ ಕುಮಾರ್,

ತಾ.ಪಂ ಸದಸ್ಯರಾದ ಓಬಯ್ಯ, ಶ್ರೀಮತಿ ರೂಪಲತಾ, ದ.ಕ ಜಿಲ್ಲಾ ಸಹಕಾರ ಸಂಘಗಳ ಉಪನಿಬಂದಕ ಪ್ರವೀಣ ಬಿ ನಾಯಕ್, ಪುತ್ತೂರು ಉಪವಿಭಾಗ ಸಹಕಾರ ಸಂಘಗಳ ಸಹಾಯಕ ನಿಬಂಧಕ ರಾಜು, ಬೆಳ್ತಂಗಡಿ ಸಹಕಾರಿ ಅಭಿವೃದ್ಧಿ ಅಧಿಕಾರಿ ಸುಕನ್ಯಾ ರಾವ್, ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣ, ಉಪಾಧ್ಯಕ್ಷೆ ದೇವಕಿ ಡಿ ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು ಶೇಖ್ ಲತೀಫ್, ದ.ಕ ಜಿಲ್ಲಾ ಸಹಕಾರಿ ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪುರುಷೋತ್ತಮ್, ಸಿ.ಎ ಬ್ಯಾಂಕ್ ಅಧ್ಯಕ್ಷರುಗಳಾದ ವಸಂತ ಮಜಲು ಕಳಿಯ, ಹರೀಶ್ ಸಾಲ್ಯಾನ್ ಬಂಗಾಡಿ, ಕುಶಾಲಪ್ಪ ಗೌಡ ಕೊಕ್ಕಡ, ಸುಂದರ ಹೆಗ್ಡೆ ವೇಣೂರು, ಶಿವ ಭಟ್ ಅಳದಂಗಡಿ, ರಕ್ಷಿತ್ ಶೆಟ್ಟಿ ಪದ್ಮುಂಜ ಹಾಗೂ ಮತ್ತಿತರ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸಹಕಾರ ರತ್ನ ಡಾ| ಎಂ.ಎನ್ ರಾಜೇಂದ್ರ ಕುಮಾರ್ ಹಾಗೂ ಶಾಸಕ ಹರೀಶ್ ಪೂಂಜ ರವರನ್ನು ವೇದಿಕೆಯಲ್ಲಿ ಗಣ್ಯರ ಸಮ್ಮುಖ ಸನ್ಮಾನಿಸಿ ಗೌರವಿಸಲಾಯಿತು.

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರು, ಸಿಬ್ಬಂದಿ ವರ್ಗ ಹಾಗೂ ಬೆಳ್ತಂಗಡಿ ತಾಲೂಕಿನ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘಗಳು ಹಾಗೂ ನವೋದಯ ಸ್ವಸಹಾಯ ಸಂಘಗಳ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.