HomePage_Banner_
HomePage_Banner_

ಬಿಲ್ಲವ ಈಡಿಗ ನಾಮಧಾರಿ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಮನವಿ

ಬೆಳ್ತಂಗಡಿ: ಕರ್ನಾಟಕ ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಗಣನೀಯ ಪ್ರಮಾಣದ ಹಿಂದುಳಿದ ವರ್ಗಕ್ಕೆ ಸೇರಿದ ಬಿಲ್ಲವರು, ಈಡಿಗರು, ನಾಮಧಾರಿಗಳು ಮತ್ತು ಇತರ ಸಮುದಾಯಗಳು ಬಹುಸಂಖ್ಯೆಯಲ್ಲಿವೆ. ಆರ್ಥಿಕವಾಗಿ, ಶೈಕ್ಷಣಿಕವಾಗಿ ತೀರಾ ಹಿಂದುಳಿದಿರುವ ಈ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ದೊರೆಯದ ಕಾರಣ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಬೇಕೆಂದು ಬಿಲ್ಲವರ ಮಹಾಮಂಡಲದ ಉಪಾಧ್ಯಕ್ಷ ನಿವೃತ್ತ ಎಸ್.ಪಿ. ಪೀತಾಂಬರ ಹೆರಾಜೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಹಿಂದುಳಿದ ವರ್ಗಗಳು ಸಾಮಾಜಿಕ, ರಾಜಕೀಯ, ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕ ಕ್ಷೇತ್ರಗಳಲ್ಲಿ ಮುಂದೆ ಬರಲು ಎಲ್ಲಾ ಸಮುದಾಯಗಳು ಸಂಘಟಿತರಾಗಬೇಕಾಗಿದೆ ಮತ್ತು ನಮ್ಮ ಬೇಡಿಕೆಗಳನ್ನು ಸರಕಾರದ ಮುಂದಿಟ್ಟು ಅವಕಾಶವನ್ನು ಮುಕ್ತವಾಗಿ ಬಳಸಿಕೊಂಡು ಬರಬೇಕಾಗಿದೆ. ಸರಕಾರ ನಿಷ್ಪಕ್ಷಪಾತವಾಗಿ ಹಿಂದುಳಿದ ಈ ಸಮಾಜಗಳಿಗೆ ಅವಕಾಶ ದೊರಕಿಸಿಕೊಡುವ ನಿಟ್ಟಿನಲ್ಲಿ ನಿಗಮದ ರಚನೆ ಮತ್ತು ಪ್ರಾಧಿಕಾರದ ರಚನೆಯನ್ನು ಮಾಡಿ ಸಹಕರಿಸಬೇಕು ಮತ್ತು ನಿರ್ಲಕ್ಷ್ಯ ಧೋರಣೆಯನ್ನು ಕೈಬಿಡಬೇಕು, ದ್ವಂದ್ವ ನಿಲುವುಗಳಿಂದ ಹೊರಬರಬೇಕು, ಸಮಪಾಲು ಸಮಬಾಲು ಎಂಬ ತತ್ವಕ್ಕೆ ಸರಕಾರ ಬದ್ಧರಾಗಿ ನಡೆದುಕೊಳ್ಳಬೇಕು. ಸರಕಾರ ತಕ್ಷಣ ಇದಕ್ಕೆ ಸ್ಪಂದಿಸಬೇಕು ಮತ್ತು ಸಮಾಜದ ಬೇಡಿಕೆಗಳನ್ನು ಈಡೇರಿಸಿಕೊಡಬೇಕು, ಜನಪ್ರತಿನಿಧಿಗಳು ಈ ವಿಚಾರದಲ್ಲಿ ಹೆಚ್ಚಿನ ಗಮನ ಕೊಟ್ಟು ಮುಖ್ಯಮಂತ್ರಿಯನ್ನು ಆಗ್ರಹಿಸಬೇಕೆಂದು ಅವರು ಹೇಳಿಕೆ ನೀಡಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.