HomePage_Banner_
HomePage_Banner_

ನ.21: ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ಉಚಿತ ವೈದ್ಯಕೀಯ ಶಿಬಿರ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಪಟ್ಟಣ ಪಂಚಾಯತ್ ಬೆಳ್ತಂಗಡಿ ಮತ್ತು ತಾಲೂಕು ಸಾರ್ವಜನಿಕ ಆಸ್ಪತ್ರೆ ಇವರ ಜಂಟಿ ಸಹಯೋಗದಲ್ಲಿ ಉಚಿತ ವೈದ್ಯಕೀಯ ಶಿಬಿರ ಬೆಳ್ತಂಗಡಿಯ ಅಂಬೇಡ್ಕರ್ ಭವನದಲ್ಲಿ ನ.21 ರಂದು ಜರುಗಲಿದೆ.
ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕರ ಅನುಕೂಲಕ್ಕಾಗಿ ಗಂಭೀರ ಖಾಯಿಲೆಗಳಾದ ಮಧುಮೇಹ, ರಕ್ತದೊತ್ತಡ, ಸಾಮಾನ್ಯ ಶೀತ, ನೆಗಡಿ, ಜ್ವರ, ಕೆಮ್ಮು ಹಾಗೂ ಇತರ ಖಾಯಿಲೆಗಳಿಗೆ ಸಂಬಂಧಪಟ್ಟಂತೆ ಮತ್ತು ಕೋವಿಡ್-19 ಗೆ ಸಂಬಂಧಿಸಿದಂತೆ ಉಚಿತ ತಪಾಸಣೆ ಹಾಗೂ ವೈದ್ಯಕೀಯ ಸಲಹೆ, ಔಷಧಿ ವಿತರಣೆ ಶಿಬಿರ ಏರ್ಪಡಿಸಲಾಗಿದೆ.
ಸಾರ್ವಜನಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು, ವಿವಿಧ ಅಂಗಡಿ ಉದ್ದಿಮೆಗಳು, ಹೊಟೇಲುಗಳ ಮಾಲೀಕರು, ಕೆಲಸಗಾರರು, ವಾಹನ ಚಾಲಕರು, ಮಾಲಕರು, ಸಂಘ ಸಂಸ್ಥೆಗಳು, ಕಛೇರಿಗಳ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಹಾಗೂ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.