HomePage_Banner_
HomePage_Banner_

ಡಿಕೆಆರ್‌ಡಿಎಸ್ ಬೆಳ್ತಂಗಡಿ ಸಂಸ್ಥೆಗೆ ರಾಜ್ಯ ಮಟ್ಟದ ಸೇವಾ ಸಿಂಧು ಪ್ರಶಸ್ತಿ ಪ್ರದಾನ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ : ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಸಮಿತಿ ಬೆಂಗಳೂರು ಇದರ ವತಿಯಿಂದ ಸಮಾನತೆ ಹಾಗೂ ಮಾನವ ಘನತೆ ಆಧಾರಿತ ನೀತಿಯುತ ಕಾರ್ಯಕ್ರಮ, ಬಡ ಮತ್ತು ಶೋಷಿತ ವರ್ಗದ ಜನರ ಸೇವೆ, ಮಹಿಳಾ ಸಬಲೀಕರಣ, ಕೋವಿಡ್ ಕಾಲಘಟ್ಟದಲ್ಲಿ ಸಲ್ಲಿಸಿದ ಅಪೂರ್ವ ಸಾಮಾಜಿಕ ಸೇವೆಯನ್ನು ಗುರುತಿಸಿ ದಕ್ಷಿಣ ಕನ್ನಡ ರೂರಲ್ ಡೆವಲಪ್‌ಮೆಂಟ್ ಸೊಸೈಟಿ(ಡಿಕೆಆರ್‌ಡಿಎಸ್) ಬೆಳ್ತಂಗಡಿ ಸಂಸ್ಥೆಗೆ ರಾಜ್ಯ ಮಟ್ಟದ ಸೇವಾ ಸಿಂಧು ಪ್ರಶಸ್ತಿ ಪ್ರದಾನ ಸಮಾರಂಭ ನ.21ರಂದು ಬೆಳ್ತಂಗಡಿ ಸಾಂತೋಮ್ ಟವರ್ ಹಾಲ್ ನಡೆಯಿತು.


ಡಿಕೆಆರ್‌ಡಿಎಸ್ ನಿರ್ದೇಶಕ ಫಾ| ಬಿನೋಯಿ ಅವರಿಗೆ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಸಂಸ್ಥಾಪಕ ಅಧ್ಯಕ್ಷ ಶ್ರೀನಿವಾಸ ಗೌಡ ಹಸ್ತಾಂತರಿಸಿದರು. ಮುಖ್ಯ ಅತಿಥಿಗಳಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಟಿ. ಪಾಪಭೋವಿ, ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ರಮೇಶ್ ಭಾಗವಹಿಸಿ ಶುಭ ಹಾರೈಸಿದರು.
ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ತಾ. ಅಧ್ಯಕ್ಷ ಪಿ.ಸಿ ಸೆಬಾಸ್ಟಿಯನ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಅಶ್ರಫ್ ಆಲಿಕುಂಞಿ ನಿರೂಪಿಸಿ, ಸದಸ್ಯ ಜೇಮ್ಸ್ ಅಬ್ರಾಮ್ ವಂದಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಪ್ರಿಯಾ ಮತ್ತು ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.