ಕಾಶಿಬೆಟ್ಟು: ಇಲ್ಲಿಯ ಕಾಶಿಬೆಟ್ಟು ಅರಳಿ ರಸ್ತೆಯಲ್ಲಿ ಬೈಹುಲ್ಲು ಸಾಗಿಸುತ್ತಿದ್ದ ಲಾರಿಗೆ ವಿದ್ಯುತ್ ತಂತಿ ತಗುಲಿ ಬೆಂಕಿಗಾಹುತಿಯಾದ ಘಟನೆ ಇಂದು (ನ.23) ಬೆಳಿಗ್ಗೆ ನಡೆದಿದೆ.
ಈ ರಸ್ತೆಯ ಕಾಂಕ್ರೀಟೀಕರಣ ಕಾಮಗಾರಿ ಪ್ರಗತಿಯಲ್ಲಿದ್ದು, ರಸ್ತೆಗೆ ಬೈಹುಲ್ಲು ಹಾಸುವ ಸಲುವಾಗಿ ಲಾರಿಯಲ್ಲಿ ಬೈಹುಲ್ಲು ಹೊತ್ತು ತರುತ್ತಿರುವ ಸಂದರ್ಭ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿದ್ದು, ಲಾರಿಗೆ ಬೆಂಕಿ ಹತ್ತಿಕೊಂಡಿದೆ. ಅಗ್ನಿ ಶಾಮಕ ದಳ ಹಾಗೂ ಸ್ಥಳೀಯರ ಸೂಕ್ತ ಕಾರ್ಯಾಚರಣೆಯಿಂದ ಬೆಂಕಿ ನಂದಿಸುವ ಕಾರ್ಯ ಮಾಡಲಾಯಿತು.