ಅರಸಿನಮಕ್ಕಿ: ಗ್ರಾಮ ವಿಕಾಸ ಸಮಿತಿ ಮಂಗಳೂರು ವಿಭಾಗ, ದ.ಕ ಜಿಲ್ಲಾ ಸಹಕಾರ ಭಾರತಿ, ವಿವೇಕಾನಂದ ವಿದ್ಯಾವರ್ದಕ ಸಂಘ ಪುತ್ತೂರು, ವಿವೇಕಾನಂದ ಪಾಲಿಟೆಕ್ನಿಕ್ ಪುತ್ತೂರು ಇವರ ಆಶ್ರಯದಲ್ಲಿ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅರಸಿನಮಕ್ಕಿ ಇದರ ನೇತೃತ್ವದಲ್ಲಿ ಉದ್ಯೋಗ ನೈಪುಣ್ಯ ತರಬೇತಿ ಶಿಬಿರದ ಉದ್ಘಾಟನಾ ಕಾರ್ಯಕ್ರಮ ನ.23ರಂದು ಅರಸಿನಮಕ್ಕಿಯಲ್ಲಿ ಜರುಗಿತು.
ಕಾರ್ಯಕ್ರಮವನ್ನು ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಉದ್ಘಾಟಿಸಿದರು. ರಾ.ಸ್ವ.ಸಂಘದ ವಿಭಾಗ ಸಹಕಾರ್ಯವಾಹ ಸುಧೀರ್ ಸಿದ್ಧಾಪುರ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪುತ್ತೂರು ವಿವೇಕಾನಂದ ಪಾಲಿಟೆಕ್ನಿಕ್ ನ ಸಹಸಂಚಾಲಕ ಸಿ.ಮಹಾದೇವ ಶಾಸ್ತ್ರಿ ಮಣಿಲಾ, ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿ.ಪ್ರಾ ಶಾಲೆಯ ಸಂಚಾಲಕ ವಾಮನ ತಾಮ್ಹನ್ಕರ್, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಸದಸ್ಯ ವೇಣುಗೋಪಾಲ ಶೆಣೈ, ಹತ್ಯಡ್ಕ ಸಹಕಾರಿ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್, ಸಹಕಾರಿ ಭಾರತೀ ಬೆಳ್ತಂಗಡಿ ಪ್ರಧಾನ ಕಾರ್ಯದರ್ಶಿ ರಾಜೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.