ಕುವೆಟ್ಟು ಗ್ರಾ.ಪಂ. ಮಟ್ಟದ ಬಿಜೆಪಿ ಕುಟುಂಬ ಮಿಲನ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಕುವೆಟ್ಟು: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಕುವೆಟ್ಟುಗ್ರಾಮ ಪಂಚಾಯತ್ ವ್ಯಾಪ್ತಿಯ ಭಾರತೀಯ ಜನತಾ ಪಕ್ಷದ ಕುಟುಂಬ ಮಿಲನ ಕಾರ್ಯಕ್ರಮವು ನ.23 ರಂದು ಗುರುವಾಯನಕೆರೆ ಹವ್ಯಕ ಭವನದಲ್ಲಿ ನಡೆಯಿತು.

ಪಕ್ಷದ ಹಿರಿಯ ಕಾರ್ಯಕರ್ತ ಗಂಗಯ್ಯ ಮೂಲ್ಯ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಾಸಕ ಹರೀಶ್ ಪೂಂಜ, ಬಿಜೆಪಿಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್, ಜಿ.ಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಮಮತಾ ಎಂ ಶೆಟ್ಟಿ, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ದಾಮೋದರ ಗೌಡ. ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಬೆಳ್ತಂಗಡಿ ಮಂಡಲ ಕಾರ್ಯದರ್ಶಿ ಶ್ರೀನಿವಾಸ ರಾವ್, ತಾಲೂಕು ಯುವ ಮೋರ್ಚಾ ಕಾರ್ಯದರ್ಶಿ ಉಮೇಶ್ ಕುಲಾಲ್, ಓಡಿಲ್ನಾಳ ಶಕ್ತಿ ಕೇಂದ್ರದ ಅಧ್ಯಕ್ಷ ವಸಂತ ಮಠ, ಕುವೆಟ್ಟು ಶಕ್ತಿ ಕೇಂದ್ರದ ಅಧ್ಯಕ್ಷ ವಿಠಲ, ಹಿರಿಯ ಕಾರ್ಯಕರ್ತರಾದ ಕಾಂತಪ್ಪ ಗೌಡ, ಶಾರದಾ ರೈಮೊದಲಾದ ವರು ಉಪಸ್ಥಿತರಿದ್ದರು

ಈ ಸಂದರ್ಭದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ವೇಣುಗೋಪಾಲ್ ಶರ್ಮ ಹಾಗೂ ಶಾಸಕ ಹರೀಶ್ ಪೂಂಜಾ ರವರನ್ನು ಸಭೆಯಲ್ಲಿ ಸನ್ಮಾನಿಸಲಾಯಿತು.
ನಾರಾಯಣಾಚಾರ್ ಕಾರ್ಯಕ್ರಮ ನಿರೂಪಿಸಿ. ಪ್ರಭಾಕರ್ ಉಪ್ಪಡ್ಕ ಸ್ವಾಗತಿಸಿ, ನಿತಿನ್ ಧನ್ಯವಾದವಿತ್ತರು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.