ಧರ್ಮಸ್ಥಳದ ಲಕ್ಷದೀಪೋತ್ಸವದ ಪಾದಾಯಾತ್ರೆಯ ಸಮಾಲೋಚನಾ ಸಭೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

 

 

 

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಭಗವಾನ್ ಮಂಜುನಾಥ ಸ್ವಾಮಿಯ ದಿವ್ಯ ಸನ್ನಿಧಿಯಲ್ಲಿ ಕಾರ್ತಿಕ ಮಾಸದ ಶುಭ ಸಂದರ್ಭದಲ್ಲಿ ನಡೆಯಲಿರುವ ಲಕ್ಷದೀಪೋತ್ಸವದ ಅಂಗವಾಗಿ ನಡೆಯಲಿರುವ ೮ನೇ ವರ್ಷದ ಪಾದಾಯಾತ್ರೆಯ ಸಮಾಲೋಚನಾ ಸಭೆ ನ.26ರಂದು ಉಜಿರೆ ಶಾರದಾ ಮಂಟಪದಲ್ಲಿ ಜರುಗಿತು.
ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ ಪಾದಾಯಾತ್ರೆ ಸಮಿತಿ ಅಧ್ಯಕ್ಷ ಡಾ.ಬಿ. ಯಶೋವರ್ಮನವರು ವಹಿಸಿದ್ದರು. ಉಜಿರೆ ಜನಾರ್ಧನ ಸ್ವಾಮಿ ದೇವಸ್ಥಾನದ ಶರತ್ ಕೃಷ್ಣ ಪಡುವೆಟ್ನಾಯ ಉಪಸ್ಥಿತರಿದ್ದರು.
ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಪಾದಾಯಾತ್ರೆ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ವಸಂತ ಸಾಲ್ಯಾನ್, ಡಾ. ಎಲ್.ಹೆಚ್ ಮಂಜುನಾಥ್, ವೇದಿಕೆಯಲ್ಲಿ ಉಪಸ್ಥಿತರಿದ್ದರು. ತಾಲೂಕಿನ ಗಣ್ಯರು, ಧರ್ಮಸ್ಥಳದ ವರ್ತಕರು, ನಾಗರೀಕರು, ಹೆಗ್ಗಡೆ ಅಭಿಮಾನಿಗಳು ಉಪಸ್ಥಿತರಿದ್ದರು.
ಪಾದಾಯಾತ್ರೆ : ಡಿ.10ರಂದು ಗುರುವಾರ ಗಂಟೆ 3ಕ್ಕೆ ಉಜಿರೆ ಜನಾರ್ಧನ ಸ್ವಾಮಿ ದ್ವಾರದಿಂದ ಧರ್ಮಸ್ಥಳದವರೆಗೆ ಪಾದಾಯಾತ್ರೆ ನಡೆಸುವುವುದಾಗಿ ಸಭೆಯಲ್ಲಿ ನಿರ್ಧರಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.