ಪಡಂಗಡಿ: 2019- 20ನೇ ಸಾಲಿನಲ್ಲಿ ವಿಶೇಷ ಪ್ರಗತಿಯನ್ನು ಸಾಧಿಸಿದ ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನ.27 ರಂದು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಉತ್ಕೃಷ್ಟ ಸಹಕಾರಿ ಸೌಧದಲ್ಲಿ ಜರುಗಿದ 106ನೇ ವಾರ್ಷಿಕ ಮಹಾಸಭೆಯಲ್ಲಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಎಂ. ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ಪ್ರದಾನ ಮಾಡಿದರು.
ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಯೋಗಿಶ್ ಕುಮಾರ್ ನಡಕ್ಕರ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಕೇಶಿನಿ ಇವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ನಿರಂಜನ ಬಾವಂತಬೆಟ್ಟು ಸೇರಿದಂತೆ, ಇತರ ನಿರ್ದೇಶಕರು, ಗಣ್ಯರು ಉಪಸ್ಥಿತರಿದ್ದರು.